ಪೊಲೀಸರು-ಪ್ರತಿಭಟನಾಕಾರರ ವಾಗ್ವಾದ
ಶ್ರೀನಿವಾಸಪುರ: ಪಟ್ಟಣದ ಬಸ್ ನಿಲ್ದಾಣ ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ಕೆಲ ಕಾಲ ವಾಗ್ವಾದ ನಡೆಯಿತು. ಪ್ರತಿಭಟನೆ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ಮಹದೇವಯ್ಯ ಏಕಾಏಕಿ ತಡೆದು ಪ್ರತಿಭಟನೆಗೆ ಅಡ್ಡಿಪಡಿಸಲು ಮುಂದಾದರು. ಇದರಿಂದ ಕೆರಳಿದ ಬಿಜೆಪಿ ಕಾರ್ಯಕರ್ತರು ವಾಗ್ವಾದಕ್ಕಿಳಿದರು. ಅಲ್ಲದೆ, ರಸ್ತೆಯಲ್ಲಿ ಕುಳಿತು ಪ್ರತಿಭಟಿಸುವುದಾಗಿ ಪಟ್ಟುಹಿಡಿದರು.