ನಕಲಿ ಅಂಕಪಟ್ಟಿ ಪ್ರಕರಣ; ಆಸ್ಪತ್ರೆ ಸಿಬ್ಬಂದಿ ಅಮಾನತು
ಕೋಲಾರ: ಕರ್ತವ್ಯ ಲೋಪದ ಆರೋಪದ ಮೇಲೆ ಮುಳಬಾಗಿಲು ಸಾರ್ವಜನಿಕ ಆಸ್ಪತ್ರೆಯ ಇಬ್ಬರು ಸಿಬ್ಬಂದಿ ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.ಸಾರ್ವಜನಿಕರ ದೂರಿನ ಮೇರೆಗೆ ಆಸ್ಪತ್ರೆ ಸಿಬ್ಬಂದಿ ಶಂಕರಪ್ಪ ಹಾಗೂ ಎಂ.ಎಂ.ಮಂಜುನಾಥ್ ಅವರನ್ನು ಅಮಾನತು ಮಾಡಿ ವಿಚಾರಣೆ ಕಾದಿರಿಸಲಾಗಿದೆ.
ನಕಲಿ ಅಂಕಪಟ್ಟಿ ಆರೋಪ: ಕರ್ತವ್ಯ ಲೋಪದ ಆರೋಪದ ಜೊತೆಗೆ, ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಗ್ರಾಮ ಲೆಕ್ಕಿಗರ ನೇಮಕಾತಿ ಸಂದರ್ಭದಲ್ಲಿ ಕೆಲವು ಅಭ್ಯರ್ಥಿಗಳಿಗೆ ನಕಲಿ ಅಂಕಪಟ್ಟಿ ತಯಾರಿಸಿಕೊಡುವಲ್ಲಿ ಈ ಇಬ್ಬರು ಪ್ರಮುಖ ಪಾತ್ರ ವಹಿಸಿದ್ದರು ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತರು ಈ ಇಬ್ಬರನ್ನು ಅಮಾನತು ಮಾಡಲು ಆರೋಗ್ಯ ಇಲಾಖೆ ಆಯುಕ್ತರಿಗೆ ಶಿಫಾರಸು ಮಾಡಿದ್ದರು. ಈ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ದೂರಿನ ಮೇರೆಗೆ ಆಸ್ಪತ್ರೆ ಸಿಬ್ಬಂದಿ ಶಂಕರಪ್ಪ ಹಾಗೂ ಎಂ.ಎಂ.ಮಂಜುನಾಥ್ ಅವರನ್ನು ಅಮಾನತು ಮಾಡಿ ವಿಚಾರಣೆ ಕಾದಿರಿಸಲಾಗಿದೆ.