ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸರ್ಕಾರಿ ಮರ ಕಡಿದು ಮಾರಲು ಯತ್ನ

Rashmi Kasaragodu
Updated On : 15 Aug 2013, 12:50 pm

ಗುಡಿಬಂಡೆ: ಇಲ್ಲಿನ ಪುರಾತನ ದೇವಸ್ಥಾನ ಭೂಮಿಯಲ್ಲಿ ಬೆಳೆದು ನಿಂತಿದ್ದ 12 ನೀಲಗಿರಿ ಮರಗಳನ್ನು ಅರ್ಚಕರೊಬ್ಬರು ಕಡಿದು ಮಾರಾಟ ಮಾಡಲೆತ್ನಿಸಿದ ಘಟನೆ ಪಟ್ಟಣದ ಹೊರವಲಯದ ಬಿಳಿಗಿರಿ ರಂಗನ ದೇವಾಲಯದ ಸಮೀಪ ಬುಧವಾರ ಸಂಜೆ ನಡೆದಿದೆ. ಮುಜರಾಯಿ ಇಲಾಖೆಗೆ ಸೇರಿದ ಸ.ನಂ 91ರಲ್ಲಿ 3.15 ಎಕರೆ ಭೂಮಿಯಲ್ಲಿ ಸುಮಾರು ಒಂದು ಎಕರೆ ಪ್ರದೇಶದಲ್ಲಿ ಹಲವು ವರ್ಷಗಳ ಹಿಂದೆ ನಿರ್ಮಾಣಗೊಂಡ ಕಲ್ಯಾಣಿ ಹಾಗೂ ದೇವಾಲಯವಿದೆ. ಇದ ಸುತ್ತಮುತ್ತಲಿನ ಖಾಲಿ ಸ್ಥಳದಲ್ಲಿ ಇತ್ತೀಚಿಗೆ ಪಟ್ಟಣ ಪಂಚಾಯ್ತಿ ಆಡಳಿತ ಪಾರ್ಕ್ ನಿರ್ಮಾಣ ಮಾಡಿದೆ. ದೇವಾಲಯದ ಹಿಂಭಾಗದ ಬ್ರಾಹ್ಮಣರ ಹಳ್ಳಿ, ಚಿನ್ನಹಳ್ಳಿ, ಮುಂತಾದ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆ ಬದಿಯಲ್ಲಿ ಬೆಳೆದು ನಿಂತಿದ್ದ ನೀಲಗಿರಿ ಮರಗಳನ್ನು ಯಾವುದೇ ಪರವಾನಿಗೆ ಪಡೆಯದೆ ಕಟಾವು ಮಾಡಿದ್ದಾರೆ ಎನ್ನಲಾಗಿದೆ. ಸುದ್ದಿ ತಿಳಿದ ಅರಣ್ಯ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ
ಚಿಂತಾಮಣಿ: ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಕಳೆದ 5 ವರ್ಷಗಳಿಂದ ನಿಷ್ಠೆಯಿಂದ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದ್ದು, ನನ್ನ ವೈಯಕ್ತಿಕ ಸಮಸ್ಯೆಗಳಿಂದ ಈ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ ಎಂ.ಎನ್.ನಾಗರಾಜ್ ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ನೀಡಿದರು.  ಸ್ಪಂದಿಸಿದ ಪದಾಧಿಕಾರಿಗಳಿಗೂ, ಕಾರ್ಯಕರ್ತರಿಗೂ ಅಭಿನಂದನೆಗಳನ್ನು ತಿಳಿಸುತ್ತೇನೆ. ನನ್ನಿಂದ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಕೋರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement