ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಟ್ರ್ಯಾಕ್ಟರ್ ಡಿಕ್ಕಿ ಸವಾರ ಸಾವು

Rashmi Kasaragodu
Updated On : 16 Aug 2013, 1:00 am

ಚಿಂತಾಮಣಿ: ಅತಿ ವೇಗ ಮತ್ತು ಅಜಾಗರೂಕತೆಯಿಂದ ಟ್ರ್ಯಾಕ್ಟರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೋನಪ್ಪಲ್ಲಿ ಗ್ರಾಮದ ಬಳಿ ಗುರುವಾರ ನಡೆದಿದೆ. ತಾಲೂಕಿನ ಅಂಬಾಜಿದುರ್ಗ ಹೋಬಳಿ ಚಾಂಡ್ರಹಳ್ಳಿ ಗ್ರಾಮದ ದೇವರಾಜ್ (30) ಎಂಬಾತನು ತನ್ನ ದ್ವಿಚಕ್ರ ವಾಹನದಲ್ಲಿ ಬರುತ್ತಿರುವಾಗ ಸರಕು ಸಾಗಾಣಿಕೆಯ ಟ್ರ್ಯಾಕ್ಟರ್ ಅತಿ ವೇಗ ಮತ್ತು ಅಜಾಗರೂಕತೆಯಿಂದ  ಡಿಕ್ಕಿ ಹೊಡೆದ ಪರಿಣಾಮ ಯುವಕ ದೇವರಾಜ್ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ
ಬಂಗಾರಪೇಟೆ: ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಗೃಹಿಣಿಯರು ಜೀವನದಲ್ಲಿ ನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ವರದಿಯಾಗಿದೆ. ತಾಲೂಕಿನ ಹುಲಿಬೆಲೆ ಪಂಚಾಯ್ತಿ ವ್ಯಾಪ್ತಿಯ ಅತ್ತಿಗಿರಿಕೊಪ್ಪ ಗ್ರಾಮದ ಹನುಮಂತು ಎಂಬುವರ ಪತ್ನಿ ಸುಜಾತ (22) ಕಳೆದ ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ, ಬೆಂಗಳೂರಿನ ದೊಮ್ಮಲೂರು ನಿವಾಸಿಯಾದ ಸುಜಾತಳನ್ನು 3 ವರ್ಷಗಳ ಹಿಂದೆ ಹನುಮಂತುಗೆ ಕೊಟ್ಟು ವಿವಾಹ ಮಾಡಲಾಗಿತ್ತು. ಮೃತಳ ಪೋಷಕರು ಮಾತ್ರ ಇದು ವರದಕ್ಷಿಣೆ ಕಿರುಕುಳ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಬೂದಿಕೋಟೆ ನಿವಾಸಿ ಚಲುವರಾಜು ಎಂಬುವರ ಪತ್ನಿ ಶಕುಂತಲಾ 38 ಎಂಬಾಕೆ ಸಹ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ.ಎರಡೂ ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement