ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನೊಂದವರ ನೋವಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ

Rashmi Kasaragodu
Updated On : 16 Aug 2013, 1:01 am

ಕ.ಪ್ರ.ವಾರ್ತೆ   ಚಿಕ್ಕಬಳ್ಳಾಪುರ   ಆ.15
ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ತತ್ವಕ್ಕೆ ಆದ್ಯತೆ ಕೊಟ್ಟು ದೇಶದಲ್ಲಿ ನೊಂದವರ ನೋವಿಗೆ ಪ್ರಾಮಾಣಿಕವಾಗಿ ಸ್ಪಂದಿಸಬೇಕು. ಸಮಾನತೆಯ ವಾತಾವರಣ ನಿರ್ಮಾಣವಾಗಬೇಕು. ಆಗ ಮಾತ್ರ ದೇಶ ಸ್ವಾತಂತ್ರ್ಯ ಗಳಿಸಿದಕ್ಕೆ ಸಾರ್ಥಕತೆ ಬರುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ, ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ದಿನೇಶ್ಗುಂಡೂರಾವ್ ತಿಳಿಸಿದರು.
ನಗರದ ಸರ್.ಎಂ.ವಿ. ಕ್ರೀಡಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ 67ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ದೇಶಕ್ಕೆ ಸ್ವಾತಂತ್ರ್ಯ ಬಂದು 66 ವರ್ಷ ಕಳೆದರೂ ದೇಶದಲ್ಲಿ ಅನೇಕರು ಇನ್ನೂ ಎಲ್ಲಾ ರೀತಿಯಲ್ಲೂ ಹಿಂದುಳಿದಿದ್ದಾರೆ. ಅಸಮಾನತೆ ಎಲ್ಲೆಡೆ ತಾಂಡವವಾಡುತ್ತಿದೆ. ಇದನ್ನು ಹೋಗಲಾಡಿಸಿ ದೇಶ ಸ್ವಾತಂತ್ರ್ಯ ಗಳಿಸಿದಕ್ಕೆ ನಾವು ನಿಜವಾದ ಅರ್ಥವನ್ನು ತರಬೇಕಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಗಳು ಬದ್ಧತೆ ಪ್ರದರ್ಶಿಸಬೇಕು ಎಂದರು. ನಾಡಿಗೆ ರೇಷ್ಮೆ, ಹಾಲು ನೀಡುತ್ತಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಒತ್ತು ಕೊಟ್ಟಿದ್ದು ಆಡಳಿತ ವ್ಯವಸ್ಥೆ  ಸುಧಾರಣೆ, ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದೆ ಎಂದರು.
ಈ ಜಿಲ್ಲೆಯಲ್ಲಿ ಅಂತರ್ಜಲದ ಅಭಾವ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತರ್ಜಲ ವಣದ್ಧಿಗೆ ಶಾಶ್ವತ ನೀರಾವರಿ ಸೌಲಭ್ಯದ ಒಂದು ಭಾಗವಾಗಿ ಎತ್ತಿನಹೊಳೆ ಯೋಜನೆಗೆ ಆಯವ್ಯಯದಲ್ಲಿ ಈಗಾಗಲೇ ಅನುಮೋದನೆ ನೀಡಿದ್ದು, ಕಾಮಗಾರಿಯನ್ನು ಶೀಘ್ರವಾಗಿ ಆರಂಭಿಸಲಾಗುವುದು. ನಾಡಿನಲ್ಲಿಯೇ ವಿಶಿಷ್ಟ ಎನ್ನುವ ವಿನ್ಯಾಸದಲ್ಲಿ 25 ಕೋಟಿ ರು. ಅನುದಾನದಲ್ಲಿ ಸಿದ್ಧವಾಗಿರುವ, ಜಿಲ್ಲಾ ಸಮುಚ್ಚಯಕಟ್ಟಡವನ್ನು  ಇದೇ ತಿಂಗಳು 23 ರಂದು ಮುಖ್ಯಮಂತ್ರಿಗಳು ಜನತೆಯ ಸೇವೆಗೆ ಸಮರ್ಪಿಸಲಿದ್ದಾರೆ. ಇನ್ನೂ ಭಾರತರತ್ನ ಸರ್. ಎಂ. ವಿ. ರವರ ಸ್ಮರಣಾರ್ಥ ತಾಲೂಕಿನ ಅಂಗಟ್ಟ ಗ್ರಾಮದ ಬಳಿ ಯುವಕರಿಗೆ ಉದ್ಯೋಗ ಮತ್ತು ತಾಂತ್ರಿಕ ತರಬೇತಿಗಾಗಿ 10 ಎಕರೆ ಪ್ರದೇಶದಲ್ಲಿ ಸಾಮರ್ಥ್ಯ ತರಬೇತಿ ಕೇಂದ್ರದ ನಿರ್ಮಾಣಕ್ಕೆ ಬಜೆಟ್ನಲ್ಲಿ ಮಂಜೂರಾತಿ ನೀಡಲಾಗಿದೆ ಎಂದರು. ಅನ್ನಭಾಗ್ಯ ಯೋಜನೆಯಲ್ಲಿ ಜಿಲ್ಲೆಯಲ್ಲಿ 2,48,990 ಜನ, ಕ್ಷೀರಭಾಗ್ಯ ಯೋಜನೆಯಡಿ ಅಂಗನವಾಡಿ ಹಾಗೂ ಶಾಲಾ ಮಕ್ಕಳು ಸೇರಿದಂತೆ ಒಟ್ಟು 2,04,942 ಮಕ್ಕಳು ಪ್ರಯೋಜನ ಪಡೆಯುತ್ತಿದ್ದಾರೆ. ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 93,815 ಫಲಾನುಭವಿಗಳಿಗೆ ಮಾಸಾಶನ ನೀಡಲಾಗುತ್ತಿದೆ. ಇನ್ನೂ ಚಿಕ್ಕಬಳ್ಳಾಪುರ ನಗರದ ವಾರ್ಡ್ ನಂ 30ರ ಸಮಗ್ರ ಅಭಿವೃದ್ಧಿ ಹಾಗೂ ಪುನರ್ವಸತಿ ಯೋಜನೆ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ನಮಗೆ ಸ್ವಾತಂತ್ರ್ಯ ಸುಲಭವಾಗಿ ದೊರೆಯಲಿಲ್ಲ. ಅಸಂಖ್ಯಾತ ಜನ ದೇಶಪ್ರೇಮಿಗಳು, ಹೋರಾಟಗಾರರು, ಮಹಾನ್ ನಾಯಕರು ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ನೀಡಿದ್ದಾರೆ. ಇವರೆಲ್ಲರ ತ್ಯಾಗ ಮತ್ತು ಬಲಿದಾನಗಳಿಂದ ಪಡೆದ ಸ್ವಾತಂತ್ರ್ಯಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ತಿಳಿಸಿದ ಅವರು, ಸ್ವಾತಂತ್ರ್ಯ ಹೋರಾಟವು ಸಾಮ್ರಾಜ್ಯಶಾಹಿ ಹಾಗೂ ದಾಸ್ಯದ ವಿರುದ್ಧ ಸರ್ವ ಸಮಾನತೆ ಹಾಗೂ ಸ್ವಾತಂತ್ರ್ಯಕ್ಕಾಗಿ ನಡೆದ ಒಂದು ದೀರ್ಘಕಾಲದ ಸೈದ್ಧಾಂತಿಕ ಹೋರಾಟ. ಸ್ವಾತಂತ್ರ್ಯ ಗಳಿಸುವುದರ ಜೊತೆಗೆ ಸ್ವಾತಂತ್ರ್ಯ ಹೋರಾಟಗಾರರು ದೂರದೃಷ್ಟಿಯ ಕನಸುಗಳನ್ನು ಹೊಂದಿದ್ದರು ಎಂದರು.
ಕ್ವಾಯಟಟ್ಕಾರ್ನರ್, ಸೆಂಥ್ ಜೋಸೆಫ್ ಕಾನ್ವೆಂಟ್ ಶಾಲೆ, ಭಾರತಿ ವಿದ್ಯಾ ಸಂಸ್ಥೆ, ಸರ್ಕಾರಿ ಪ್ರೌಢಶಾಲೆಯ ಮಕ್ಕಳು ನಡೆಸಿಕೊಟ್ಟ ನಣತ್ಯ ಕಾರ್ಯಕ್ರಮ ಗಮನ ಸೆಳೆಯಿತು.
 ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 9 ಜನರನ್ನು ಸನ್ಮಾನಿಸಲಾಯಿತು.
ಚಿಕ್ಕಬಳ್ಳಾಪುರ ಶಾಸಕ ಡಾ.ಕೆ. ಸುಧಾಕರ್, ಜಿಲ್ಲಾ ಪಂಚಾಯತ್ ಅಧ್ಯಕ್ಷ  ಚಿನ್ನಪ್ಪ, ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಎನ್. ಶಿವಪ್ರಸಾದ್ ಮುತಾದವರು ಉಪಸ್ಥಿತರಿದ್ದರು.


ನಾಡ ಕಚೇರಿಯಲ್ಲಿ ಧ್ವಜ ಹಾರಲೇ ಇಲ್ಲ


ಗುಡಿಬಂಡೆ: ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಸ್ವಾತಂತ್ರ್ಯೋತ್ಸವ ದಿನದಂದು ಕಡ್ಡಾಯವಾಗಿ ಧ್ವಜಾರೋಹಣವನ್ನು ಮಾಡಬೇಕೆಂದು ಆದೇಶವಿದ್ದರೂ ಗುಡಿಬಂಡೆ ತಾಲೂಕು ಸೋಮೇನಹಳ್ಳಿ ನಾಡ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ದಿನವಾದ ಗುರುವಾರ ರಾಷ್ಟ್ರದ ಧ್ವಜವನ್ನು ಹಾರಿಸಲಿಲ್ಲ. ಅಧಿಕಾರಿಗಳು ಯಾವುದೇ ಕಾರ್ಯಕ್ರಮವನ್ನೂ ಸಹ ಕೈಗೊಳ್ಳಲಿಲ್ಲ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement