ಮಕ್ಕಳಲ್ಲಿ ದೇಶಾಭಿಮಾನ ಮೂಡಿಸಿ: ರಮೇಶಕುಮಾರ್
ಶ್ರೀನಿವಾಸಪುರ: ಮಕ್ಕಳಿಗೆ ದೇಶಾಭಿಮಾನದ ಬಗ್ಗೆ ಮನವರಿಕೆ ಮೂಡಿಸಬೇಕು ಎಂದು ಶಾಸಕ ಕೆ.ಆರ್. ರಮೇಶಕುಮಾರ್ ವಿಷಾದಿಸಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ಸರ್ಕಾರಿ ಬಾಲಕಿಯರ ಪಪೂ ಕಾಲೇಜು ಆಟದ ಮೈದಾನದಲ್ಲಿ ಏರ್ಪಡಿಸಿದ್ದ 67ನೇ ಸ್ವಾತಂತ್ರ್ಯ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ವಿಧಾನಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ, ತಹಸೀಲ್ದಾರ್ ಎಚ್.ಜಯ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಹಮದ್ ಖಲೀಲ್, ಎಇಇ ವೆಂಕಟರಾಯಪ್ಪ, ಸರ್ಕಲ್ ಇನ್ಸ್ಪೆಕ್ಟರ್ ಶಿವಪ್ರಸಾದ್, ಕಾರ್ಯನಿರ್ವಹಣಾಧಿಕಾರಿ ಸತೀಶಕುಮಾರ್, ಪುರಸಭೆ ಮುಖ್ಯಾಧಿಕಾರಿ ರೇಣುಕಾ, ಹಾಗೂ ದಿಂಬಾಲ ನಾರಾಯಣಸ್ವಾಮಿ, ಶೇಷಾಪುರ ಗೋಪಾಲ್, ಪಾಳ್ಯ ಗೋಪಾಲರೆಡ್ಡಿ, ಜಾಮಶೆಟ್ಲು ಶ್ರೀನಿವಾಸ್ ಹಾಗೂ ಇನ್ನು ಹಲವಾರು ಮುಖಂಡರು ಉಪಸ್ಥಿತರಿದ್ದರು.
ಸಾಹಿತಿ ಕೆ.ವಿ. ನಾಗರಾಜ್ ಅವರಿಂದ ದೇಶಭಕ್ತಿ ಗೀತೆಗಳ ಗಾಯನ ನಡೆಯಿತು. ಶಾಲಾ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಮುದ ನೀಡಿದವು. ಕೃಷ್ಣಮೂರ್ತಿ ಸ್ವಾಗತಿಸಿ, ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.