ಇಂದು ಪ್ರತಿಭಾ ಪುರಸ್ಕಾರ
ಕೋಲಾರ: ಜಿಲ್ಲಾ ಕುರುಬರ ಹೋರಾಟ ಸಮಿತಿ ವತಿಯಿಂದ ಆ.17 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಜಿಲ್ಲೆಯ ಎಲ್ಲಾ ವರ್ಗದ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ಶೇ 80 ಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿರುವ ವಿದ್ಯಾಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ.
ಶಾಸಕ ಆರ್. ವರ್ತೂರು ಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಪತ್ರಕರ್ತ ಕೆ. ಪ್ರಹ್ಲಾದರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಖಂಡರಾದ ಬೆಗ್ಲಿ ಸೂರ್ಯಪ್ರಕಾಶ್, ನಗರಸಭೆ ಮಾಜಿ ಅಧ್ಯಕ್ಷ ರಘುರಾಮ್, ಕುರುಬರ ಸಂಘದ ಅಧ್ಯಕ್ಷ ಕೆ.ಮಧುಸೂದನ್, ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಗೋಪಿನಾಥ್. ಪ್ರಧಾನ ಕಾರ್ಯದರ್ಶಿ ಕೆ.ಎಸ್. ಗಣೇಶ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ಮಂಜುನಾಥ್ ಇನ್ನಿತರರು ಭಾಗವಹಿಸುವರೆಂದು ಸಮಿತಿಯ ಅಧ್ಯಕ್ಷ ತ್ಯಾಗರಾಜ ಮುದ್ದಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.