ಶಾಲೆಯಲ್ಲಿ ಮಕ್ಕಳಿಗೆ ತಟ್ಟೆ, ಲೋಟ ವಿತರಣೆ
ಶ್ರೀನಿವಾಸಪುರ: ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನಗಳನ್ನು ಮಾಡಿ ತಮ್ಮ ಪ್ರಾಣವನ್ನು ದೇಶಕ್ಕಾಗಿ ಆರ್ಪಣೆ ಮಾಡಿದ ರಾಷ್ಟ್ರ ಮಹನೀಯರು ಹಾಕಿಕೊಟ್ಟಂತಹ ತತ್ವ ಸಿದ್ಧಾಂತ ಆದರ್ಶಗಳನ್ನು ಇಂದಿನ ವಿದ್ಯಾರ್ಥಿಗಳೆಲ್ಲರೂ ತಪ್ಪದೆ ಪಾಲಿಸಬೇಕೆಂದು ಶಿಕ್ಷಕ ಹೆಚ್. ಆಂಜಪ್ಪ ಕರೆ ನೀಡಿದ್ದಾರೆ.
ಅವರು 67ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಶ್ರೀನಿವಾಸಪುರ ತಾಲೂಕಿನ ಹೊದಲಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ತಟ್ಟೆ ಮತ್ತು ಲೋಟ ವಿತರಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಹೊದಲಿ ಗ್ರಾಮ ಪಂಚಾಯ್ತಿಯ ಸದಸ್ಯರಾದ ಎನ್. ಹನುಮಂತರೆಡ್ಡಿ ಅವರು ತಟ್ಟೆ ಹಾಗೂ ಲೋಟಗಳನ್ನು ಮತ್ತು ಶಾಲಾ ಆಭಿವೃದ್ಧಿ ಸಮಿತಿ ಅಧ್ಯಕ್ಷರಾದ ಎಲ್. ಮಂಜುನಾಥರೆಡ್ಡಿ ಶಾಲಾ ವಿದ್ಯಾರ್ಥಿಗಳಿಗೆ ಸಹಿಯನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯಶಿಕ್ಷಕರಾದ ಜಿ.ಎಂ. ಶೋಭಾದೇವಿ ಸಹಶಿಕ್ಷಕರಾದ ಕವಿತ, ಶಾಂತಮ್ಮ, ಮಾತನಾಡಿದರು ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.