ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅಧಿಕಾರಿಗಳ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ: ಅನಿಲ್

Rashmi Kasaragodu
Updated On : 18 Aug 2013, 1:11 am

ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆ ನಂತರ ಜಿಲ್ಲೆಯ ಅಭಿವೃದ್ಧಿ ಕಡೆ ಗಮನ ಹರಿಸಲಾಗಿದೆ. ಹದಗೆಟ್ಟಿರುವ ಆಡಳಿತ ವ್ಯವಸ್ಥೆ ಸರಿಪಡಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಮ್ಮ ಪಕ್ಷದ ಶಾಸಕರು ಪ್ರಯತ್ನಿಸುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಎಲ್. ಅನಿಲಕುಮಾರ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಅವರು ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಹೊಸ ಸರ್ಕಾರ ಬಂದ ನಂತರ ಅಧಿಕಾರಿಗಳ ವರ್ಗಾವಣೆಯನ್ನು ಪ್ರಮುಖ ಆದ್ಯತೆಯನ್ನಾಗಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದಲ್ಲಿ ಹುರುಳಿಲ್ಲ. ಸರ್ಕಾರ ಯಾವ ಅಧಿಕಾರಿ ಪ್ರಾಮಾಣಿಕ, ಯಾರು ಅಪ್ರಮಾಣಿಕ ಎಂದು ತನ್ನದೇ ಮೂಲಗಳಿಂದ ಹಾಗೂ ಜಿಲ್ಲಾ ಸಚಿವರಿಂದ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಲು ಅಧಿಕಾರ ಇರುವುದರಿಂದ ನಾನಾಗಲಿ ಇಲ್ಲವೇ ನಮ್ಮ ಮುಖಂಡರಾಗಲಿ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುವ ಪ್ರಶ್ನೆಯೇ ಇಲ್ಲವೆಂದು ತಿಳಿಸಿದರು.
8 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕೈಯಲ್ಲಿ ಆಡಳಿತವಿರಲಿಲ್ಲ. ಇದರಿಂದ ವಾತಾವರಣ ಕಲುಷಿತಗೊಂಡಿತ್ತು. ಇದನ್ನು ಸರಿಪಡಿಸಲು ಕೆಲ ಸಮಯ ಬೇಕಾಗುತ್ತದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಆಡಳಿತ ವ್ಯವಸ್ಥೆ ಸುಧಾರಣೆ ಸಂಬಂಧ ಈಗಾಗಲೇ ತಾವು ಮತ್ತು ಜಿಲ್ಲೆಯ ನಮ್ಮ ಪಕ್ಷದ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದೆ. ಸೋಮವಾರ ಹೊಸ ಜಿಲ್ಲಾಧಿಕಾರಿ ಆಗಮಿಸುತ್ತಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ಸಹ ಭರ್ತಿ ಮಾಡಿಸಿ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂಬ ಆರೋಪ ತಳ್ಳಿ ಹಾಕಿದ ಅವರು, ಯಾವುದಾದರೂ ಪ್ರಮುಖ ಸಮಸ್ಯೆಯಿದ್ದರೆ ಖಂಡಿತ ಕೇಂದ್ರ ಸಚಿವರ ಗಮನಕ್ಕೆ ತಂದು ಬಗೆಹರಿಸುತ್ತೇನೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಪ್ರಸಾದ್ ಬಾಬು, ಜೆ.ಕೆ.ಜಯರಾಮ್, ತಂಬಿಹಳ್ಳಿ ನಾಗರಾಜು, ಅಂಚೆ ಅಶ್ವತ್ಥ್, ಬೆಳಮಾರನಹಳ್ಳಿ ಮುನಿವೆಂಕಟಪ್ಪ, ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟಚಲಪತಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement