ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಚರಂಡಿ ಕಾಮಗಾರಿ ಕಳಪೆ ಆರೋಪ

Rashmi Kasaragodu
Updated On : 18 Aug 2013, 1:09 am

ಕೋಲಾರ: ನಗರದ ಟೇಕಲ್ ಮುಖ್ಯ ರಸ್ತೆ ಅಭಿವೃದ್ಧಿ ಹಿನ್ನೆಲೆಯಲ್ಲಿ ನಿರ್ಮಿಸುತ್ತಿರುವ ಕಾಂಕ್ರಿಟ್ ಚರಂಡಿ ಕಾಮಗಾರಿಯ ಕಡೆ ಸಂಬಂಧಪಟ್ಟ ಅಧಿಕಾರಿಗಳು ಗಮನ ನೀಡದಿರುವುದರಿಂದ ಗುತ್ತಿಗೆದಾರರು ಮನಬಂದಂತೆ ಕೆಲಸ ಮಾಡಿಸುವ ಮೂಲಕ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡುತ್ತಿದ್ದಾರೆಂದು ನಾಗರಿಕರು ದೂರಿದ್ದಾರೆ.
ಈ ಸಂಬಂಧ ಜಯನಗರ ನಿವಾಸಿಗಳಾದ ಕೆ.ವಿ. ಮಂಜುನಾಥ್, ನಾರಾಯಣಸ್ವಾಮಿ ಇನ್ನಿತರರು ಪತ್ರಿಕಾ ಹೇಳಿಕೆ ನೀಡಿ, ಕಾಂಕ್ರಿಟ್ ಚರಂಡಿ ಕಾಮಗಾರಿಯ ಗುಣಮಟ್ಟ ಸರಿಯಲ್ಲ, ಚರಂಡಿ ನಿರ್ಮಾಣಕ್ಕಾಗಿ ಹಳೆ ಕಟ್ಟದ ತ್ಯಾಜ್ಯಗಳನ್ನು ಬಳಸಲಾಗಿದೆ. ಗುತ್ತಿಗೆದಾರರನ್ನು ಪ್ರಶ್ನಿಸಿದರೆ ಇಂಜಿನಿಯರ್ ಅವರನ್ನು ಕೇಳಿ ಎಂದು ತಮಗೂ ಕಾಮಗಾರಿಗೂ ಯಾವುದೇ ಸಂಬಂಧವಿಲ್ಲದಂತೆ ಉತ್ತರ ನೀಡುತ್ತಾರೆಂದು ಆರೋಪಿಸಿದ್ದಾರೆ. ಅಧಿಕಾರಿಗಳು ಕಾಮಗಾರಿಯ ಗುಣಮಟ್ಟ ಪರಿಶೀಲಿಸದಿರುವುದು ಕಳಪೆ ಕಾಮಗಾರಿಗೆ ಕಾರಣವಾಗಿದ್ದು ಕೂಡಲೇ ಸಮಗ್ರ ತನಿಖೆ ನಡೆಸಿ ಗುಣಮಟ್ಟದ ಚರಂಡಿ ಮತ್ತು ರಸ್ತೆಯ ಕಾಮಗಾರಿ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಸ್ವಾತಂತ್ರ್ಯೋತ್ಸವ ಆಚರಣೆ
ಶಿಡ್ಲಘಟ್ಟ:  ತ್ಯಾಗ, ಬಲಿದಾನದಿಂದ ಪಡೆದ ಸ್ವಾತಂತ್ರ್ಯವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕು. ಹಿರಿಯರ ಸೇವೆಯನ್ನು ಸ್ಮರಿಸಬೇಕು. ಮಕ್ಕಳಿಗೆ ಶಿಕ್ಷಕರು ದೇಶಪ್ರೇಮವನ್ನು ಸಮರ್ಪಕ ರೀತಿಯಲ್ಲಿ ಬೋಧಿಸಿದಲ್ಲಿ ಉತ್ತಮ ರಾಷ್ಟ್ರ ಕಟ್ಟಲು ಸಾಧ್ಯ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು. ತಮ್ಮ ಹುಟ್ಟೂರು ಎಲ್.ಮುತ್ತಕದಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ, ಶಾಲಾ ಮಕ್ಕಳಿಗೆ ಸಮವಸ್ತ್ರ, ಪುಸ್ತಕಗಳನ್ನು ವಿತರಿಸಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಶಿವಲೀಲಾ ರಾಜಣ್ಣ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement