ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನೀರಿನ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಯತ್ನ

Vishwanath S
Updated On : 20 Aug 2013, 12:55 pm

ಕ.ಪ್ರ.ವಾರ್ತೆ ,  ಕೋಲಾರ ,  ಆ. 19
ಜಿಲ್ಲೆಯನ್ನು ಕಾಡುತ್ತಿರುವ ನೀರಿನ ಸಮಸ್ಯೆಯನ್ನು ನಿವಾರಣೆ ಮಾಡಲು ಕೈಲಾದಷ್ಟು ಮಟ್ಟಿಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ನೂತನ ಜಿಲ್ಲಾಧಿಕಾರಿ ಡಿ.ಕೆ. ರವಿ ಭರವಸೆ ನೀಡಿದರು.
ಹದಿನೈದು ತಿಂಗಳ ಕಾಲ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಉದ್ಯೋಗ ಮತ್ತು ತರಬೇತಿ ಇಲಾಖೆಗೆ ವರ್ಗಾವಣೆಗೊಂಡಿರುವ ಡಾ.ಡಿ.ಎಸ್.ವಿಶ್ವನಾಥ್ ಅವರಿಂದ ಸೋಮವಾರ ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಆದ್ಯತೆಯ ಮೇರೆಗೆ ಪರಿಹಾರ ಕಲ್ಪಿಸಲು ಬದ್ಧನಾಗಿದ್ದು ಇದಕ್ಕೆ ಜನತೆಯ ಸಹಕಾರ ಅತಿಮುಖ್ಯವೆಂದು ಹೇಳಿದರು. ಮೂಲತ- ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಡೊಡ್ಡಕಪ್ಪಲು ಗ್ರಾಮದವರಾದ ಡಿ.ಕೆ.ರವಿ 2009ರಲ್ಲಿ ಐಎಎಸ್ ಮುಗಿಸಿ ಗುಲ್ಬರ್ಗ ಮತ್ತು ರಾಯಚೂರಿನಲ್ಲಿ ಉಪ ವಿಭಾಗಾಧಿಕಾರಿಯಾಗಿ, ಕೊಪ್ಪಳ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಕೋಲಾರಕ್ಕೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಬಿಎಸ್ಸಿ (ಆಗ್ರಿ)ಯನ್ನು ಬೆಂಗಳೂರಿನ ಜಿಕೆವಿಕೆಯಲ್ಲಿ ಮಾಡಿ, ಎಂಎಸ್ಸಿ(ಆಗ್ರಿ)ಯನ್ನು ದೆಹಲಿಯಲ್ಲಿ ಮುಗಿಸಿದ ನಂತರ ಐಎಎಸ್ ಪರೀಕ್ಷೆ ಬರೆದು ಭಾರತ ಆಡಳಿತ ಸೇವೆಗೆ ಆಯ್ಕೆಯಾಗಿದ್ದಾರೆ.
ಯುವಕರಾಗಿರುವ ಡಿ.ಕೆ. ರವಿ ಗ್ರಾಮೀಣ ಪ್ರದೇಶದ ಸ್ಥಿತಿ-ಗತಿಯನ್ನು ಅರಿತರವಾಗಿರುವುದಲ್ಲದೆ ಕೃಷಿ ಕ್ಷೇತ್ರದ ಬಗ್ಗೆ ಜ್ಞಾನ ಹೊಂದಿರುವುದರಿಂದ ಕೋಲಾರ ಜಿಲ್ಲೆಯ ಕೃಷಿ ಬಿಕ್ಕಟ್ಟಿಗೆ ಪರಿಹಾರ ನೀಡಲು ಪ್ರಯತ್ನಿಸಬಹುದೆಂಬ ಆಶಾ ಭಾವನೆಯನ್ನು ಜನತೆ ಹೊಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement