ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಛಾಯಾಗ್ರಾಹಕರ ಸಮುದಾಯ ಭವನಕ್ಕೆ 5 ಲಕ್ಷ: ವರ್ತೂರ್

Vishwanath S
Updated On : 21 Aug 2013, 12:58 pm

ಕ.ಪ್ರ.ವಾರ್ತೆ , ಕೋಲಾರ , ಆ.20
ಜಿಲ್ಲಾ ಛಾಯಾಗ್ರಾಹಕರ ಸಂಘದವರು ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನಕ್ಕೆ 5 ಲಕ್ಷ ಆರ್ಥಿಕ ಸಹಾಯ ನೀಡುವುದಾಗಿ ಮಾಜಿ ಸಚಿವ, ಹಾಲಿ ಶಾಸಕ ಆರ್.ವರ್ತೂರ್ ಪ್ರಕಾಶ್ ಘೋಷಣೆ ಮಾಡಿದರು.                 
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ತಾಲೂಕು ಛಾಯಾಗ್ರಾಹಕರ ಸಂಘ ಮತ್ತು ವಿಡಿಯೋಗ್ರಾಹಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಯಾವುದೇ ಸಮಾರಂಭದಲ್ಲೂ ಕನಿಷ್ಠ 5 ರಿಂದ 30 ನಿಮಿಷಗಳವರೆಗೆ ಮಾತನಾಡುವ ಮೂಲಕ ಜನರಿಗೆ ಹೊಸ ಹೊಸ ವಿಚಾರಗಳನ್ನು ಮುಟ್ಟಿಸುತ್ತಿದ್ದ ಶಾಸಕರು ಕೇವಲ 1 ನಿಮಿಷದಲ್ಲಿ ಭಾಷಣ ಮುಗಿಸಿದ್ದು ಸಭಿಕರಿಗೆ ನಿರಾಸೆಯನ್ನುಂಟು ಮಾಡಿತು.
ಆರೋಗ್ಯ ಸರಿಯಿಲ್ಲ: ಛಾಯಾಗ್ರಾಹಕರ ಸಂಘದ ಪದಾಧಿಕಾರಿಗಳ ಮೇಲಿನ ಪ್ರೀತಿಯಿಂದ ಬಂದಿದ್ದೇನೆ. ಸಮುದಾಯ ಭವನಕ್ಕೆ 5 ಲಕ್ಷ ನೀಡುವೆ ಎಂದೇಳಿ ಭಾಷಣ ಮೊಕಟುಗೊಳಿಸಿದರು.
ಇದಕ್ಕೂ ಮುನ್ನ ಮಾತನಾಡಿದ ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಗಣೇಶ್, ಎಲ್ಲಾ ಛಾಯಾಗ್ರಾಹಕರು ಒಗ್ಗಟ್ಟಿನಿಂದ ಇದ್ದರೆ ಅದರಿಂದ ಒಳ್ಳೆ ಪ್ರತಿಫಲ ಪಡೆಯಬಹುದು ಸಲಹೆ ನೀಡಿದರು. ಆರಕ್ಷಕ ವೃತ್ತ ನಿರೀಕ್ಷಕ ಕೆ.ಎನ್.ರಮೇಶ್, ಛಾಯಾಗ್ರಾಹಕರು ವೃತ್ತಿ ಜೀವನದ ಸಂದರ್ಭದಲ್ಲಿ ಇತರರಿಗೆ ಆದರ್ಶಪ್ರಾಯರಾಗುವ ರೀತಿಯಲ್ಲಿ ತಮ್ಮ ವ್ಯಕ್ತಿತ್ವ ರೂಢಿಸಿಬೇಕೆಂದರು.
ಇದೇ ಸಂದರ್ಭದಲ್ಲಿ ಹಿರಿಯ ಛಾಯಾಗ್ರಾಹಕ ಸರ್ವಜ್ಞಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿರುವ ಛಾಯಾಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಮುಖಂಡರಾದ ಬೆಗ್ಲಿ ಸೂರ್ಯಪ್ರಕಾಶ್, ಛಾಯಾಗ್ರಾಹಕರ ಸಂಘದ ಜಿಲ್ಲಾಧ್ಯಕ್ಷ ವಿ.ಕೃಷ್ಣ, ಜಿಲ್ಲಾ ಕಾರ್ಯದರ್ಶಿ ಪಿ.ಸುರೇಶ್ ಬಾಬು, ಜಿಲ್ಲಾ ಖಜಾಂಚಿ ಡಿ.ಸುರೇಶ್ ಬಾಬು, ತಾಲೂಕು ಅಧ್ಯಕ್ಷ ರಂಗನಾಥ್, ಕಾರ್ಯದರ್ಶಿ ಸತೀಶ್ ಕುಮಾರ್, ತಾಲೂಕು ಪಂಚಾಯತಿ ಉಪಾಧ್ಯಕ್ಷೆ ಮಂಜುಳಾ ಮುಂತಾದವರು ಇದ್ದರು.
ರಕ್ತದಾನ ಶಿಬಿರ: ಜಿಲ್ಲಾಧಿಕಾರಿ ಡಿ.ಕೆ.ರವಿ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ಇಂತಹ ಕಾರ್ಯಕ್ರಮಗಳನ್ನು ನಡೆಸುವುದರಿಂದ ಬಡವರಿಗೆ ತುಂಬಾ ಅನುಕೂಲವಾಗತ್ತದೆ. ಮುಂದೆಯೂ ಇಂತಹ ಸಹ ನಡೆಸಿಕೊಂಡು ಹೋಗುವಂತೆ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement