ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಾರಿಗೆ ಸಂಸ್ಥೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

Vishwanath S
Updated On : 22 Aug 2013, 12:40 pm

ಶಿಡ್ಲಘಟ್ಟ: ಸಮರ್ಪಕ ಸಾರಿಗೆ ವ್ಯವಸ್ಥೆ ಹಾಗೂ ಬಸ್ ಡಿಪೋ ನಿರ್ಮಾಣಕ್ಕೆ ಒತ್ತಾಯಿಸಿ ಎಸ್‌ಎಫ್‌ಐ ಸಂಘಟನೆಯ ಕಾರ್ಯಕರ್ತರು ಪಟ್ಟಣದ ಸಾರಿಗೆ ಸಂಸ್ಥೆಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಗ್ರಾಮಾಂತರ ಪ್ರದೇಶಗಳಿಂದ ಸಾವಿರಾರು ಮಂದಿ ವಿದ್ಯಾರ್ಥಿಗಳು ಶಾಲಾ- ಕಾಲೇಜುಗಳಿಗೆ ಪಟ್ಟಣಕ್ಕೆ ಬರುತ್ತಿದ್ದಾರೆ. ಇವರೆಲ್ಲರೂ ಕೃಷಿ ಕಾರ್ಮಿಕರ ಮಕ್ಕಳಾಗಿದ್ದು, ಗ್ರಾಮೀಣ ಪ್ರದೇಶಗಳಿಂದ ಬರಲು ಸಾರಿಗೆ ಬಸ್ಸುಗಳನ್ನೇ ಅವಲಂಬಿಸಿದ್ದಾರೆ. ಸಮಯಕ್ಕೆ ಬಾರದ ಸಾರಿಗೆ ಬಸ್ಸುಗಳಿಂದಾಗಿ ವಿದ್ಯಾಭ್ಯಾಸವು ಕುಂಠಿತಗೊಳ್ಳುತ್ತಿದೆ, ಪಾಸ್‌ಗಳನ್ನು ಮಾಡಿಸಿದ್ದರೂ ಸಹ ಪ್ರಯೋಜನಕ್ಕೆ ಬರುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಸಾರಿಗೆ ಇಲಾಖೆ ಸಂಚಾರಿ ನಿಯಂತ್ರಕ ಲಕ್ಷ್ಮೀನರಸಿಂಹಯ್ಯ, ಎಸ್‌ಎಫ್‌ಐ ಜಿಲ್ಲಾ ಸಂಚಾಲಕ ಕುಂದಲಗುಕರ್ ಮುನೀಂದ್ರ, ಫೈಯಾಜ್, ಸದಾನಂದ, ರಾಘವೇಂದ್ರ, ವೆಂಕಟೇಶ್, ಮುರಳಿ, ಶಶಿ, ಗಂಗರಾಜು, ಲಕ್ಷ್ಮೀನಾರಾಯಣ, ಮಂಜುನಾಥ್, ರಮೇಶ್, ಶಿವಕುಮಾರ್ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement