ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕೃಷಿ ಭಿವೃದ್ಧಿ ಆಯುಕ್ತ ಶಿವಸ್ವಾಮಿಯಿಂದ ರೇಷ್ಮೆ ಗೂಡಿನ ಮಾರುಕಟ್ಟೆ ಪರಿಶೀಲನೆ

Srinivasa Murthy VN
Updated On : 22 Aug 2013, 11:56 am

ಶಿಡ್ಲಘಟ್ಟ: ರಾಜ್ಯ ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತ ಶಿವಸ್ವಾಮಿ ಪಟ್ಟಣದ ರೇಷ್ಮೆ ಗೂಡಿನ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರು ಮತ್ತು ರೇಷ್ಮೆ ನೂಲು ಬಿಚ್ಚಾಣಿಕೆದಾರರೊಂದಿಗೆ ಮಾರುಕಟ್ಟೆಯಲ್ಲಿರುವ ಅವ್ಯವಸ್ಥೆಗಳ ಬಗ್ಗೆ ಚರ್ಚಿಸಿದರು.
ಪಟ್ಟಣದ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಶುಚಿತ್ವದ ಕೊರತೆಯಿದ್ದು ನೂತನ ಶೌಚಾಲಯಗಳನ್ನು ನಿರ್ಮಿಸಬೇಕು. ಮಾರುಕಟ್ಟೆಯ ರಸ್ತೆ ಸರಿಪಡಿಸಬೇಕು. ಕುಡಿಯುವ ನೀರನ್ನು ಒದಗಿಸಬೇಕು. ರೈತರು ಬೆಳೆದು ತಂದ ರೇಷ್ಮೆ ಗೂಡನ್ನು ಮಾರುಕಟ್ಟೆಯ ನೆಲದ ಮೇಲೆ ಹಾಕಿ ಹರಾಜು ಮಾಡುವುದನ್ನು ತಪ್ಪಿಸಲು ಹೊಸ ಜಾಲರಾಗಳನ್ನು ಖರೀದಿಸಿ ಮಾರುಕಟ್ಟೆಯಲ್ಲಿ ಅಳವಡಿಸಬೇಕು. ರೇಷ್ಮೆ ಗೂಡು ಮಾರುಕಟ್ಟೆಗೆ ಗೂಡು ತರುವ ರೈತರಿಂದ ಸಂಗ್ರಹಿಸುವ ಪ್ರವೇಶ ಶುಲ್ಕವನ್ನು ರದ್ದುಪಡಿಸಬೇಕು. ಮಾರುಕಟ್ಟೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವುದು ಸೇರಿದಂತೆ ದೇಶದಲ್ಲೇ ಅತಿ ದೊಡ್ಡದಾದ ರೇಷ್ಮೆ ಗೂಡಿನ ಮಾರುಕಟ್ಟೆ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದೆ. ಹಾಗು ರೇಷ್ಮೆ ಕೃಷಿಕರು ಹಾಗೂ ನೂಲು ಬಿಚ್ಚಾಣಿಕೆದಾರರು ಮಾರುಕಟ್ಟೆಯಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ರೇಷ್ಮೆ ಉದ್ದಿಮೆಯನ್ನು ನಂಬಿದವರ ಕಷ್ಟಗಳಿಗೆ ಇಲಾಖೆಯು ಸ್ಪಂದಿಸಬೇಕು. ಆಯುಕ್ತರ ಕಚೇರಿಯಲ್ಲಿ ದಿನಾಂಕ ನಿಗದಿ ಮಾಡಿ ಅಧಿಕೃತ ಸಭೆ ಕರೆಯಬೇಕು ಎಂಬ ಬೇಡಿಕೆಗಳುಳ್ಳ ಮನವಿಪತ್ರವನ್ನು ರೈತ ಮುಖಂಡರು ಆಯುಕ್ತರಾದ ಶಿವಸ್ವಾಮಿಯವರಿಗೆ ಸಲ್ಲಿಸಿದರು.
ಅಧಿಕಾರಿಗಳೊಂದಿಗೆ ಚರ್ಚಿಸಿ ಮಾರುಕಟ್ಟೆ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ರೈತರು ಮತ್ತು ನೂಲುಬಿಚ್ಚಾಣಿಕೆದಾರರೊಂದಿಗೂ ಆದಷ್ಟು ಬೇಗ ದಿನಾಂಕ ನಿಗದಿಪಡಿಸಿ ಸಭೆ ನಡೆಸುವುದಾಗಿ ರಾಜ್ಯ ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತ ಶಿವಸ್ವಾಮಿ ಭರವಸೆ ನೀಡಿದರು.
ಜಿಲ್ಲಾ ರೇಷ್ಮೆ ಬೆಳೆಗಾರರ ಹಿತರಕ್ಷಣಾ ವೇದಿಕೆ ಸಂಚಾಲಕ ಯಲುವಳ್ಳಿ ಸೊಣ್ಣೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಅಬ್ದುಲ್ ಅಜೀಜ್, ಹೊಸಪೇಟೆ ಜಯಣ್ಣ, ವೀರಾಪುರ ನಂಜಪ್ಪ, ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement