ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಮಾಜದ ಪ್ರಗತಿಗೆ ಕೆಂಪೇಗೌಡ ಕಾಳಜಿ ಶ್ಲಾಘನೀಯ

Srinivasa Murthy VN
Updated On : 22 Aug 2013, 11:49 am

ಚಿಕ್ಕಬಳ್ಳಾಪುರ: ನಾಡಪ್ರಭು ಕೆಂಪೇಗೌಡರು ಜಾತಿ, ಧರ್ಮ ಲೆಕ್ಕಿಸದೇ ಸಮಾಜದ ಪ್ರಗತಿಗೆ ಸಾಕಷ್ಟು ಕಾಳಜಿ ಹೊಂದಿದ್ದರು. ಅಂತಹ ಮಹಾಪುರುಷರ ಹೆಸರಿನಲ್ಲಿ ಸಂಘಟನೆ ನಿರ್ಮಾಣ ಮಾಡಿರುವುದು ಶ್ಲಾಘನೀಯ ಎಂದು ಆದಿಚುಂಚನಗಿರಿ ಶಾಖಾ ಮಠದ ಮಂಗಳನಂದನಾಥ ಸ್ವಾಮೀಜಿ ಹೇಳಿದರು.
ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಾಡಪ್ರಭು ಕೆಂಪೇಗೌಡ ಕನ್ನಡ ಸೇನೆ ಸಂಘಟನೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಆರ್ಶೀವಚನ ನೀಡಿದ ಅವರು, ಸಮಾಜದಲ್ಲಿ ಹಲವು ಸಂಘಟನೆಗಳಿವೆ.
ಆ ಸಂಘಗಳಿಂದ ಸಮಾಜಕ್ಕೆ ಒಳಿತಾಗುತ್ತಿದೆ. ಸಮಾಜದಲ್ಲಿ ಕೊಲೆ, ಸುಲಿಗೆ, ಭ್ರಷ್ಟಾಚಾರ ನಡೆಯುತ್ತಿದ್ದು, ಈ ಬಗ್ಗೆ ಸಂಘಟನೆ ಎಚ್ಚೆತ್ತುಕೊಂಡು ವಿರೋಧ ವ್ಯಕ್ತಪಡಿಸಬೇಕು ಎಂದರು.
ನಾಡಪ್ರಭು ಕೆಂಪೇಗೌಡ ಕನ್ನಡ ಸೇನೆ ಸಂಸ್ಥಾಪಕ ಅಧ್ಯಕ್ಷ ಬಿ. ಮುನೇಗೌಡ ಮಾತನಾಡಿ, ನಾಡಪ್ರಭು ಕೆಂಪೇಗೌಡರು ಒಂದು ಜನಾಂಗಕ್ಕೆ ಸೀಮಿತರಾದ ವ್ಯಕ್ತಿಯಲ್ಲ. ಅವರು ಜಾತ್ಯತೀತ ನಾಯಕ. ನಾಡಪ್ರಭು ಕೆಂಪೇಗೌಡರು ಕನ್ನಡ ಭಾಷೆಗೆ ಮಾತ್ರ ಸೀಮಿತರಾಗದೆ ಕನ್ನಡ, ತೆಲುಗು, ತಮಿಳು ಭಾಷೆ ಬಲ್ಲವರಾಗಿದ್ದರು ಎಂದರು.
ವೃತ್ತ ನಿರೀಕ್ಷಕ ಮಹೇಶ್‌ಕುಮಾರ್ ಮಾತನಾಡಿದರು. ಕೋಮುಲ್‌ನ ಕೆ.ವಿ. ನಾಗರಾಜು ಹಾಗೂ ಮತ್ತಿತರರು ಹಾಜರಿದ್ದರು.

ಆರೋಗ್ಯ ಅರಿವು ಶಿಬಿರ
ಮುಳಬಾಗಲು:
ರೋಷನ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಪಟ್ಟಣದ ನೂಗಲಬಂಡೆ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆರೋಗ್ಯ ಆರಿವು ಕಾರ್ಯಕ್ರಮ ಏರ್ಪಡಿಸಲಾಗಿತ್ತು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಇಮ್ಮಿಯಾಜ್ ಪಾಷ ಮಾತನಾಡಿ, ಮಕ್ಕಳ ಆರೋಗ್ಯದ ಬಗ್ಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಮಾಹಿತಿ ನೀಡಿದರು. ಟ್ರಸ್ಟ್ ಅಧ್ಯಕ್ಷ ಎಂ. ಜಬೀಬುಲ್ಲಾ ಮಾತನಾಡಿದರು. ಟ್ರಸ್ಟ್ ಕಾರ್ಯದರ್ಶಿ ವಕೀಲ ರಿಯಾಜ್, ಪುರಸಭೆ ಸದಸ್ಯ ಹಮೀದಾ ಬೇಗಂ, ಬಿಎಚ್ವಿ ದರ್ಗಾ ಸಮಿತಿಯ ಕಾರ್ಯದರ್ಶಿ ತಜಮುಲ್ ಅಹಮದ್, ಕರವೇ ತಾಲ್ಲೂಕು ಅಧ್ಯಕ್ಷ ಕೆ.ಎಸ್. ನಾಗೇಶ್‌ಬಾಬು, ಇರ್ಫಾನ್ ಹಜರತ್, ಮುಖಂಡ ವಿಜಯಭಾಸ್ಕರ್ ಭಾಗವಹಿಸಿದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement