ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮೂಲಸೌಕರ್ಯಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Vishwanath S
Updated On : 24 Aug 2013, 1:19 am

ಕ.ಪ್ರ.ವಾರ್ತೆ ,  ಚಿಂತಾಮಣಿ ,  ಆ.23
ಚಿಂತಾಮಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ಇರುವ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಕಾಲೇಜಿನಲ್ಲಿ ವಿವಿಧ ಸಮಸ್ಯೆಗಳು ತಾಂಡವವಾಡುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ಇತ್ತ ಗಮನ ಹರಿಸದೆ ನಿರ್ಲಕ್ಷ್ಯ ತೋರುತ್ತಿರುವುದರಿಂದ ನೂರಾರು ವಿದ್ಯಾರ್ಥಿಗಳು ತಾಲೂಕು ಎಬಿವಿಪಿ ಸಂಘಟನೆಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಎಬಿವಿಪಿ ಮುಖಂಡ ಮಂಜುನಾಥರೆಡ್ಡಿ ಮಾತನಾಡಿ, ಕಾಲೇಜಿನಲ್ಲಿ ವಾಟರ್ ಫಿಲ್ಟರ್ ಅನ್ನು ಕಸಾಪ ಮತ್ತು ನಗರಸಭೆ ಅಧಿಕಾರಿಗಳು ಈ ಹಿಂದೆ ನಡೆದ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮಕ್ಕೆ ಉಪಯೋಗಿಸಿಕೊಂಡು ಇರುವುದರಿಂದ ವಾಟರ್ ಫಿಲ್ಟರ್ ಕೆಟ್ಟುಹೋಗಿರುವ ಬಗ್ಗೆ ದೂರು ನೀಡಿದ್ದರೂ ನಿರ್ಲಕ್ಷಿಸಿದ್ದಾರೆ ಮತ್ತು ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳಿಲ್ಲದೆ ತೊಂದರೆಯಾಗಿದೆಯೆಂದು ಆರೋಪಿಸಿದರು. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಸ್ಪಂದಿಸಿ ಕೆಲಸ ಮಾಡಿರಿ ಎಂದು ಆಗ್ರಹಿಸಿ ನಂತರ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.
ವಿದ್ಯಾರ್ಥಿಗಳಾದ ಸತೀಶ್, ನರೇಶ್, ಪ್ರವೀಣ್, ಯಶ್ವಂತ್, ಅರುಣ್, ವಿಕ್ರಮ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭನಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement