ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

Vishwanath S
Updated On : 24 Aug 2013, 1:13 am

ಕೆಜಿಎಫ್: ಶಾಶ್ವತ ನೀರಾವರಿ ಯೋಜನೆ ಸರ್ಕಾರದ ಭರವಸೆಗಳಾಗಿ ಮಾತ್ರ ಉಳಿದಿದ್ದು, ಡಾ. ಪರಮಶಿವಯ್ಯ ವರದಿ ಅನುಷ್ಠಾನಕ್ಕೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ ಕಳೆದ 8 ವರ್ಷಗಳು ಮನೆಯಿಲ್ಲದೆ ತತ್ತರಿಸಿ ಹೋಗಿರುವ ಜನಸಾಮಾನ್ಯರಿಗೆ, ರೈತರಿಗೆ ಹಾಗೂ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದ್ದು, ಜಿಲ್ಲೆಗೆ ಯಾವುದೇ ನದಿ ಮೂಲಗಳಿಲ್ಲ ಮತ್ತು ಸುಮಾರು 750 ಕೆರೆಗಳು ಬತ್ತಿ ಹೋಗಿವೆ. ಆದ್ದರಿಂದ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಶಾಶ್ವತ ನೀರಾವರಿ ಯೋಜನೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಕರವೇ ಕಾರ್ಯಕರ್ತರು ಒತ್ತಾಯಿಸಿದರು.
ಅದೇ ರೀತಿ ಕೆರೆಗಳಲ್ಲಿ ಹೂಳೆತ್ತಬೇಕು, ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಬೇಕು, ಜಿಲ್ಲೆಗೆ ವಿಶೇಷ ಮಾದರಿಯ ಪ್ಯಾಕೇಜ್‌ನ್ನು ಘೋಷಿಸಬೇಕು, ತೀರಾ ಹದೆಗೆಟ್ಟಿರುವ ರಸ್ತೆಗಳನ್ನು ಹಾಗೂ ನಗರಸಭೆ ಬಸ್ ನಿಲ್ದಾಣವನ್ನು ದುರಸ್ತಿಗೊಳಿಸಬೇಕು, ಯಾವುದೇ ಸಮಯವನ್ನು ನಿಗದಿಪಡಿಸದೆ ಮನಬಂದಂತೆ ವಿದ್ಯುತ್ ಕಡಿತಗೊಳಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಸ್ಥಳಿಯ ಸರ್ಕಾರಿ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅಗತ್ಯ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಪತ್ರವನ್ನು ರಾಬರ್ಟ್‌ಸನ್‌ಪೇಟೆ ಠಾಣಾ ಪಿಎಸ್‌ಐ ಎಲ್. ಆಂಜಪ್ಪ ಅವರ ಮೂಲಕ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ನಂಜುಂಡಪ್ಪ, ನಗರ ಅಧ್ಯಕ್ಷ ಆರ್. ಸುಬ್ರಮಣಿ, ಗೌರವಾಧ್ಯಕ್ಷ ವಿ.ಎಸ್. ಪ್ರಕಾಶ್, ಎಸ್. ಮದಿರಪ್ಪ, ವೆಂಕಟೇಶಪ್ಪ, ಜಿ. ನಾರಾಯಣಸ್ವಾಮಿ, ತಿಮ್ಮರಾಜು, ನಾರಾಯಣಸ್ವಾಮಿ, ಗೋಪಾಲ, ರಮೇಶ್, ನಾಗಭೂಷಣ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement