ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಬಂಗಾರಪೇಟೆಯಲ್ಲಿ ಕಾಂಗ್ರೆಸ್ ವಿಜಯೋತ್ಸವ

Srinivasa Murthy VN
Updated On : 25 Aug 2013, 12:32 pm

ಬಂಗಾರಪೇಟೆ: ತೀವ್ರ ಕುತೂಹಲ ಕೆರಳಿಸಿದ್ದ ಎರಡು ಲೋಕಸಭೆ ಸ್ಥಾನಗಳ ಉಪ ಚುನಾವಣೆ ಫಲಿತಾಂಶ ಎರಡೂ ಕ್ಷೇತ್ರಗಳಲ್ಲಿಯೂ ಆಡಳಿತರೂಢ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸುವ ಮೂಲಕ ವಿರೋಧಿ ಪಕ್ಷಗಳಿಗೆ ಮುಖಭಂಗ ಉಂಟು ಮಾಡಿರುವುದನ್ನು ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರಗಳಿಗೆ 21ರಂದು ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಲು ಜೆಡಿಎಸ್-ಬಿಜೆಪಿ ಪಕ್ಷದೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡರೂ ಮತದಾರರು ಈ ಅಪವಿತ್ರ ಮೈತ್ರಿಗೆ ಮಣ್ಣನೆ ನೀಡದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪ್ರಿಯ ಆಡಳಿತವನ್ನು ಮೆಚ್ಚಿ ಕೈಗೆ ಜೈ ಎಂದಿದ್ದಾರೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಕೆ. ಚಂದ್ರಾರೆಡ್ಡಿ ತಿಳಿಸಿದರು. ಅಲ್ಲಿ ಜೆಡಿಎಸ್ ಮತ್ತೊಮ್ಮೆ ಗೆಲ್ಲಿದೆ ಎಂದು ಅಂಬರೀಷ್ ವಿರುದ್ಧ  ಲಘುವಾಗಿ ಮಾತನಾಡಿದ್ದ ಪರಾಜಿತ ಅಭ್ಯರ್ಥಿ ಪುಟ್ಟರಾಜು ಅಂಬರೀಷ್ ಅವರಿಗೆ ಜನಪ್ರಿಯತೆ ಕುಗ್ಗಿದೆಯೋ ಇಲ್ಲವೋ ಎಂಬುದನ್ನು ಇನ್ನಾದರೂ ಅರಿತು ಮಾತನಾಡಲಿ ಎಂದು ಸಲಹೆ ನೀಡಿದರು. ಕೆ. ಚಂದ್ರಾರೆಡ್ಡಿ ನೇತೃತ್ವದಲ್ಲಿ ಕಾರ್ಯಕರ್ತರು ಸರ್ಕಾರಿ ಆಸ್ಪತ್ರೆ ಬಳಿ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಪಟ್ಟರು. ಈ ವೇಳೆ ಬ್ಲಾಕ್ ಅಧ್ಯಕ್ಷ ಮಂಜುನಾಥ್, ಪುರಸಭೆ ಸದಸ್ಯ ಶಪಿ, ಮುಖಂಡರಾದ ಡಿ.ಕಿಶೋರ್‌ಕುಮಾರ್, ವೆಂಕಟೇಶ್ ಮತ್ತಿತರರು ಇದ್ದರು.

ಕಾಂಗ್ರೆಸ್‌ಗೆ ಯಲ್ಲಪ್ಪ ನೇಮಕ
ಟೇಕಲ್: ಜಿಲ್ಲಾ ಹಾಗೂ ತಾಲೂಕು ಕಾಂಗ್ರೆಸ್ ವರಿಷ್ಠರ ನಿರ್ದೇಶನದ ಮೇರೆಗೆ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಇತರೆ ಹಿಂದುಳಿದ ವರ್ಗಗಳ ವಿಭಾಗದ ಮಾಸ್ತಿ ಬ್ಲಾಕ್ ಪ್ರಧಾನ ಕಾರ್ಯದರ್ಶಿಯನ್ನಾಗಿ ಟೇಕಲ್‌ನ ಕೆ.ಜಿ. ಹಳ್ಳಿಯ ಎಸ್.ಆರ್. ಯಲ್ಲಪ್ಪ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೋಲಾರ ಜಿಲ್ಲಾ ಕಾಂಗ್ರೆಸ್ ಇತರೆ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಅಶೋಕ್‌ಕುಮಾರ್ ನೇಮಕ ಮಾಡಿರುತ್ತಾರೆ.
ಅಭಿನಂದನೆ: ಎಂದಿನಂತೆ ಪಕ್ಷದ ಸಂಘಟನೆ ಕಾರ್ಯದಲ್ಲಿ ಎಸ್.ಆರ್. ಯಲ್ಲಪ್ಪ ಅವರು ಸಕ್ರಿಯವಾಗಿ ತೊಡಗಿಸಿಕೊಂಡು ಕಾಂಗ್ರೆಸ್ ಸಬಲೀಕರಣ ಕಾರ್ಯದಲ್ಲಿ ಸಮರ್ಪಣಾ ಭಾವದಿಂದ ಕಾರ್ಯನಿರ್ವಹಿಸಬೇಕೆಂದು ಹಾಗೂ ಈ ಸಂದರ್ಭದಲ್ಲಿ ನೂತನವಾಗಿ ಮಾಸ್ತಿ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಅಲಂಕರಿಸಿರುವ ಅವರಿಗೆ ಜಿಲ್ಲಾಧ್ಯಕ್ಷ ಅಶೋಕ್‌ಕುಮಾರ್ ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement