ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಪತ್ನಿ, ಮಗು ಕೊಲೆ ಆರೋಪಿ ಸೆರೆಗೆ ಆಗ್ರಹಿಸಿ ಎಸ್‌ಎಫ್‌ಐ ಪ್ರತಿಭಟನೆ

Srinivasa Murthy VN
Updated On : 27 Aug 2013, 11:42 am

ಕ.ಪ್ರ.ವಾರ್ತೆ ಕೋಲಾರ ಆ.27
ನಗರದ ಕೀಲುಕೋಟೆಯಲ್ಲಿ ವಾಸವಾಗಿದ್ದ ಸರ್ಕಾರಿ ನೌಕರ ಎಸ್.ಕೆ.ಸಂತೋಷ ಕುಮಾರ್ ಎಂಬುವರು ಕಳೆದ ಜು.10ರಂದು ತನ್ನ ಹೆಂಡತಿ ವೀಣಾ ಮತ್ತು ಮಗು ದೀಪ್ತಿಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದು ಕೂಡಲೇ ಆರೋಪಿಯನ್ನು ಬಂಧಿಸಬೇಕೆಂದು ಒತ್ತಾಯಿಸಿ ಎಸ್.ಎಫ್.ಐ ಸಂಘಟನೆ ಮಂಗಳವಾರ ಪ್ರತಿಭಟನೆ ನಡೆಯಿತು. ಮೆಥೋಡಿಸ್ಟ್‌ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕೊಲೆ ಆರೋಪಿ ಕಳೆದ 48 ದಿನಗಳಿಂದ ನಾಪತ್ತೆಯಾಗಿದ್ದಾರೆ, ಪೊಲೀಸರು ಆರೋಪಿಯನ್ನು ಬಂಧಿಸಲು ವಿಳಂಬ ಮಾಡುತ್ತಿದ್ದಾರೆಂದು ಎಸ್.ಎಫ್.ಐ ಜಿಲ್ಲಾಧ್ಯಕ್ಷ ಅಂಬರೀಷ್ ಆರೋಪಿಸಿ, ಜಿಲ್ಲಾ ಆಡಳಿತ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಇದೇ ಪ್ರಕರಣದ ಹಿನ್ನಲೆಯಲ್ಲಿ ಜನವಾದಿ ಮಹಿಳಾ ಸಂಘಟನೆಯು ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರೂ ಆರೋಪಿಯನ್ನು ಬಂಧಿಸಲು ವಿಳಂಬ ಮಾಡಲಾಗುತ್ತಿದೆ, ಆರೋಪಿ ಎಲ್ಲೇ ಇದ್ದರೂ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು, ಇಲ್ಲದಿದ್ದರೆ ಮುಂದಿನ ಹೋರಾಟ ಉಗ್ರ ಸ್ವರೂಪ ತಾಳಲಿದೆ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ವಾಸುದೇವರೆಡ್ಡಿ, ನಗರ ಸಂಘಟನಾ ಕಾರ್ಯದರ್ಶಿ ಮುಸ್ತಾಕ್ ಇದ್ದರು.
ನಗರಸಭೆಯ ಸದಸ್ಯರು ಸಹ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಈ ಮಧ್ಯೆ ಜನವಾದಿ ಮಹಿಳಾ ಸಂಘಟನೆಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿಯ ಧರಣಿ ಮುಂದುವರೆದಿದೆ.

ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ
ಚಿಕ್ಕಬಳ್ಳಾಪುರ:
ಜಿಲ್ಲಾ ವ್ಯಾಪ್ತಿಯಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಸಹಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಅಡಿಯಲ್ಲಿ ಭರ್ತಿ ಮಾಡುವವರೆಗೆ ಅಥವಾ ಮಾರ್ಚ್ 2014ರವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಅಡ್‌ಹಾಕ್ ವ್ಯವಸ್ಥೆಯಡಿ 240 ಪ್ರಾಥಮಿಕ ಮತ್ತು 32 ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳುತ್ತಿದ್ದು ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಅಜಿತ್ ಪ್ರಸಾದ್ ತಿಳಿಸಿದ್ದಾರೆ.
ಆಯ್ಕೆ ಸಂಬಂಧ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಈಗಾಗಲೇ ಪ್ರಕಟಣೆ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಪಡೆಯಲು ಹಾಗೂ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ಪಡೆಯಲು ಸಂಬಂಧಪಟ್ಟ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.  ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅರ್ಹ ಅಭ್ಯರ್ಥಿಗಳ ನೋಂದಣಿಯು ಆಗಸ್ಟ್ 26 ರಿಂದ 31 ರವರೆಗೆ, ಅರ್ಜಿಗಳ ಪರಿಶೀಲನೆಯು ಸೆಪ್ಟೆಂಬರ್ 2 ರಿಂದ 4 ರ ವರೆಗೆ ಹಾಗೂ ಆಯ್ಕೆ ಪಟ್ಟಿ ಪ್ರಕಟಣೆಯು ಸೆಪ್ಟೆಂಬರ್ 6 ರಂದು ಹಾಗೂ ತಾತ್ಕಾಲಿಕ ಅತಿಥಿ ಶಿಕ್ಷಕರ ಸ್ಥಳ ನಿಯುಕ್ತಿ ಆದೇಶವನ್ನು ಸೆಪ್ಟೆಂಬರ್ 9 ರಂದು ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement