ತಾಪಂ ಅಧ್ಯಕ್ಷೆ, ಉಪಾಧ್ಯಕ್ಷ ಶೀಘ್ರ ಕಾಂಗ್ರೆಸ್‌ಗೆ: ಶಾಸಕ
ಕ.ಪ್ರ.ವಾರ್ತೆ ಬಂಗಾರಪೇಟೆ ಆ.29
ತಾಪಂ ಅಧ್ಯಕ್ಷೆ ರೇಣುಕಾಬಾಲಚಂದ್ರ ಹಾಗೂ ಉಪಾಧ್ಯಕ್ಷ ಸಂಪಂಗಿರೆಡ್ಡಿ ಶೀಘ್ರ ಕಾಂಗ್ರೆಸ್ ಸೇರಲಿದ್ದಾರೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದ್ದಾರೆ.
ಗುರುವಾರ ಕಾರ್ಯಕ್ರಮವೊಂದರಲ್ಲಿ ಇಬ್ಬರೂ ಶಾಸಕರ ಪಕ್ಕದಲ್ಲೇ ಕುಳಿತುಕೊಂಡಿದ್ದರು. ಅಲ್ಲದೆ, ಇತ್ತೀಚೆಗೆ ಶಾಸಕರ ಪ್ರತಿಯೊಂದು ಕಾರ್ಯಕ್ರಮಕ್ಕೂ ಇಬ್ಬರೂ ತಪ್ಪದೆ ಹಾಜರಾಗುವ ಮೂಲಕ ಬಿಜೆಪಿ ಕಾರ್ಯಕರ್ತರಲ್ಲಿ ಅಶ್ಚರ್ಯ ಮೂಡಿಸಿದ್ದರು.
ಸಭೆಯಲ್ಲಿದ್ದ ಅಧ್ಯಕ್ಷೆ ರೇಣುಕಾ ಮತ್ತು ಉಪಾಧ್ಯಕ್ಷ ಸಂಪಂಗಿರೆಡ್ಡಿ ಅವರನ್ನು ಕನ್ನಡಪ್ರಭ ಪ್ರಶ್ನಿಸಿದಾಗ ಅವರು ನೇರವಾಗಿ ಉತ್ತರ ಕೊಡದೆ ಮುಗುಳ್ನಗೆ ಬೀರುವ ಮೂಲಕ ಕಾಂಗ್ರೆಸ್ ಸೇರುವುದಾಗಿ ತಿಳಿಸಿದರು.
ಈ ಇಬ್ಬರನ್ನು ಬೃಹತ್ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳುವುದರ ಮೂಲಕ ಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಗೊಳಿಸುವುದಾಗಿ ಶಾಸಕ ನಾರಾಯಣಸ್ವಾಮಿ ತಿಳಿಸಿದರು.