ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಇಂದು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Vishwanath S
Updated On : 31 Aug 2013, 12:32 pm

ಕ.ಪ್ರ.ವಾರ್ತೆ , ಚಿಕ್ಕಬಳ್ಳಾಪುರ , ಆ.30
ಬಾಗೇಪಲ್ಲಿ ತಾಲೂಕಿನ ಘಂಟಂವಾರಪಲ್ಲಿ ಗ್ರಾಮದ ಭೈರವೇಶ್ವರ ದೇವಸ್ಥಾನದ ಬಳಿ ಆ. 31ರಂದು ಮಧ್ಯಾಹ್ನ 12 ಗಂಟೆಗೆ ಇಕೋಪಾರ್ಕ್ ಅಭಿವೃದ್ಧಿ ಹಾಗೂ ಬಿ.ಬಿ. ರಸ್ತೆಯಿಂದ ಹೊಸಹುಡ್ಯ ಮುಖ್ಯ ರಸ್ತೆಯವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭ ಆಯೋಜಿಸಲಾಗಿದೆ.
ಜಿಲ್ಲಾಡಳಿತ ಹಾಗೂ ರೂರಲ್ ಎಲೆಕ್ಟ್ರಿಫೀಕೇಷನ್ ಕಾರ್ಪೋರೇಷನ್ ಸಂಯುಕ್ತಾಶ್ರಯದಲ್ಲಿ ಆರ್‌ಇಸಿಎಲ್ ಯೋಜನೆಯಡಿ ಆಯೋಜಿಸಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಖಾತೆ ಸಚಿವ ಡಾ.ಎಂ. ವೀರಪ್ಪ ಮೊಯ್ಲಿ ನೆರವೇರಿಲಿದ್ದು, ಅಧ್ಯಕ್ಷತೆಯನ್ನು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್.ಎನ್. ಚಿನ್ನಪ್ಪ, ವಿಧಾನಪರಿಷತ್ ಸದಸ್ಯ ನಸೀರ್ ಅಹಮದ್, ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್, ಆರ್‌ಇಸಿಎಲ್ ಪ್ರಧಾನ ವ್ಯವಸ್ಥಾಪಕ ರಾಖೇಶ್ ಅರೋರ ಮುಂತಾದವರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement