ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕಟ್ಟಡ ಕಾರ್ಮಿಕರಿಗೆ ವಂಚನೆ: ಸಿಐಟಿಯು ನಾಯಕನ ಆಕ್ರೋಶ

Rashmi Kasaragodu
Updated On : 2 Dec 2013, 12:26 pm

ಶಿಡ್ಲಘಟ್ಟ: ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಕಟ್ಟಡ ಕಾರ್ಮಿಕರು ವಂಚನೆಗೆ ಒಳಗಾಗುತ್ತಿದ್ದಾರೆ ಎಂದು ಸಿಐಟಿಯು ಸಂಘಟನೆ ಮುಖಂಡ ಕುಂದಲಗುರ್ಕಿ ಮುನೀಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಪೂಜಮ್ಮ ದೇವಾಯಲದ ಹಿಂಭಾಗದ ಸಮುದಾಯ ಭವನದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡಿ, ಸರ್ಕಾರದಿಂದ ಬರುತ್ತಿರುವ ಸವಲತ್ತುಗಳಿಗಾಗಿ ಕಾರ್ಮಿಕರು ಹೋರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಯಾವುದೇ ಸೌಲಭ್ಯಗಳು ಕಾರ್ಮಿಕರಿಗೆ ನೇರವಾಗಿ ತಲುಪುತ್ತಿಲ್ಲ, ಕೆಲ ಮಧ್ಯವರ್ತಿಗಳು ಕಾರ್ಮಿಕರ ಹೆಸರಿನಲ್ಲಿ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದರು. ಕಾರ್ಮಿಕ ಇಲಾಖೆಯ ಅಧಿಕಾರಿ ರಾಮಯ್ಯ, ತಿರುಮಳಪ್ಪ ಮಾತನಾಡಿದರು. ನಾರಾಯಣಸ್ವಾಮಿ, ಶ್ರೀನಿವಾಸ್, ಕೃಷ್ಣಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement