ನಕಲಿ ವೈದ್ಯರು: ಕ್ರಮಕ್ಕೆ ಒತ್ತಾಯ
ಕೋಲಾರ: ಬಡ ರೋಗಿಗಳ ಜೀನವದ ಜೊತೆ ಚೆಲ್ಲಾಟವಾಡುತ್ತಿರುವ ನಕಲಿ ವೈದ್ಯರ ವಿರುದ್ಧ ಗೂಂಡಾಕಾಯ್ದೆ ಜಾರಿಗೆ ತಂದು ಅವರನ್ನು ಗಡಿಪಾರು ಮಾಡಬೇಕೆಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ. ಈ ಕುರಿತು ಹೇಳಿಕೆ ನೀಡಿರುವ ರೈತ ಸಂಘದ ಜಿಲ್ಲಾಧ್ಯಕ್ಷ ಕೆ. ನಾರಾಯಣ ಗೌಡ ಜಿಲ್ಲೆಯಲ್ಲಿ ವ್ಯಾಪಕವಾಗಿ ನಾಯಿ ಕೊಡೆಗಳಂತೆ ತಲೆ ಎತ್ತಿರುವ ಯಾವುದೇ ಪರವಾನಿಗೆ ಇಲ್ಲದೆ ಆಸ್ಪತ್ರೆಗಳನ್ನು ಕೂಡಲೇ ಬಂದ್ ಮಾಡಿ ಬಡವರ ರಕ್ಷಣೆ ಮಾಡುವಂತೆ ಜಿಲ್ಲಾ ಆಡಳಿತವನ್ನು ಒತ್ತಾಯಿಸಿದ್ದಾರೆ.
ಆರೋಗ್ಯ ಸಚಿವರೇ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವುದರಿಂದ ಕೂಡಲೇ ವಿಶೇಷ ಸಭೆ ನಡೆಸಿ ನಕಲಿ ವೈದ್ಯರನ್ನು ಮಟ್ಟ ಹಾಕಬೇಕೆಂದು ತಿಳಿಸಿದ್ದಾರೆ.