ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಉಮೇಶ್ ಕತ್ತಿ ಪ್ರತಿಕೃತಿ ದಹನ

Rashmi Kasaragodu
Updated On : 3 Dec 2013, 12:25 pm

ಬಾಗೇಪಲ್ಲಿ: ಬಿಜೆಪಿ ಶಾಸಕ ಉಮೇಶ್ ಕತ್ತಿ ರಾಜ್ಯವನ್ನು ವಿಭಜನೆ ಮಾಡಬೇಕೆಂದು ಹೇಳಿಕೆ ನೀಡಿರುವುದನ್ನು ವಿರೋಧಿಸಿ ಕರವೇ ತಾಲೂಕು ಶಾಖೆ ಅವರ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿತು. ಡಾ.ಎಚ್.ಎನ್. ವೃತ್ತದಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಶಾಸಕ ಉಮೇಶ್ ಕತ್ತಿ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ಬಂದ ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗದಲ್ಲಿ ಅವರ ಪ್ರತಿಕೃತಿ ದಹನ ಮಾಡಿದರು. ಜಿಲ್ಲಾ ಕರವೇ ಪ್ರಧಾನ ಕಾರ್ಯದರ್ಶಿ ಜಿ. ಚಂದ್ರಶೇಖರ್ ಮಾತನಾಡಿದರು. ಮೂರ್ತಿ, ಜಬೀವುಲ್ಲಾ, ನಿರ್ಮಲಮ್ಮ ಇದ್ದರು.
ಬಾಲ ಕಾರ್ಮಿಕರ ಕಾರ್ಯಾಚರಣೆ
ಬಾಗೇಪಲ್ಲಿ: ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ವೆಂಕಟೇಶ್ ನೇತೃತ್ವದ ತಂಡ ಕಾರ್ಮಿಕ ಇಲಾಖೆ ಹಾಗೂ ಪೊಲೀಸರ ಸಹಕಾರದೊಂದಿಗೆ ಪಟ್ಟಣದ ಹೋಟೆಲ್, ಬಾರ್, ಅಂಗಡಿ ಮುಂಗಟ್ಟುಗಳು ಸೇರಿದಂತೆ ವಿವಿಧೆಡೆ ಅನಿರೀಕ್ಷಿತ ದಾಳಿ ನಡೆಸಿ ಬಾಲ ಕಾರ್ಮಿಕರ ಕಾರ್ಯಾಚರಣೆ ಕೈಗೊಂಡಿತು. ಆದರೆ, ಬಾಲ ಕಾರ್ಮಿಕರ ಸುಳಿವು ದೊರೆಯಲಿಲ್ಲ.ಪ್ರತಿ ಅಂಗಡಿ, ಹೋಟೆಲ್, ಬಾರ್‌ಗಳ ಮಾಲೀಕರಿಗೆ ಎಚ್ಚರಿಕೆ ನೀಡಿ ಬಾಲ ಕಾರ್ಮಿಕರನ್ನು ದುಡಿಸಿಕೊಳುವುದು ಕಾನೂನಿನ ಪ್ರಕಾರ ಅಪರಾಧ. ಕಂಡು ಬಂದಲ್ಲಿ ಅಂತಹ ಅಂಗಡಿಗಳ ಮಾಲೀಕರಿಗೆ ಶಿಕ್ಷೆ ಖಚಿತ ಎಂದು ಬಿಇಒ ಸೂಚನೆ ನೀಡಿದರು. ದಾಳಿಯಲ್ಲಿ ಕಾರ್ಮಿಕ ಇಲಾಖೆ ನಿರೀಕ್ಷಕ ಸೋಮಶೇಖರ್, ಯೋಜನಾ ನಿರ್ದೇಶಕ ರಮೇಶ್, ಎಎಸ್‌ಐ ಜಿ.ಎಂ. ತಾಹೇರ್, ಪುರಸಭೆ ಆರೋಗ್ಯ ನಿರೀಕ್ಷಕ ಎ. ಮುರಳೀಧರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement