ಕಾಂಗ್ರೆಸ್ ಕಾರ್ಯಕರ್ತರ ಸಭೆ
ಬಂಗಾರಪೇಟೆ: ಮುಂಬರುವ ಲೋಕಸಭೆ ಚುನಾವಣೆ ಯಾವ ರೀತಿ ಎದುರಿಸಬೇಕು ಎಂಬುದರ ಬಗ್ಗೆ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಚರ್ಚಿಸಲಾಯಿತು.
ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎ. ಪಾರ್ಥಸಾರಥಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದ್ದರೂ, ನಿರ್ಲಕ್ಷ್ಯವಹಿಸಿದರೆ ಮತಗಳಕೆಯಲ್ಲಿ ಹಿನ್ನಡೆಯಾಗಲಿದೆ. ಆದ್ದರಿಂದ ಗ್ರಾಮ ಮಟ್ಟದಿಂದ ಕಾರ್ಯಕರ್ತರನ್ನು ರಚಿಸಿ ಪಕ್ಷವನ್ನು ಸಂಘಟಿಸಬೇಕು ಎಂದು ತಿಳಿಸಿದರು.
ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮತಾನಾಡಿ, ಹಿಂದಿನ ಬಿಜೆಪಿ ಶಾಸಕರು ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡದೆ ಬರೀ ಸುಳ್ಳು ಭರವಸೆ ನೀಡುತ್ತಾ ಜನರನ್ನು ಮರಳು ಮಾಡಿದ್ದರು. ಇದರ ಪ್ರಭಾವ ಬಿಜೆಪಿ ಕೋಟೆಯಲ್ಲಿ ಮತ್ತೆ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದರು. ಬೂದಿಕೋಟೆ ಬ್ಲಾಕ್ ಅಧ್ಯಕ್ಷ ಮಂಜುನಾಥಗೌಡ, ಪುರಸಭೆ ಮಾಜಿ ಅಧ್ಯಕ್ಷ ಕೆ. ಚಂದ್ರಾರೆಡ್ಡಿ, ಶಂಷುದ್ದಿನ್ ಬಾಬು, ಹೊಸರಾಯಪ್ಪ, ಎಸ್.ಎಂ. ಗೋಪಾಲ್,ನಂಜಪ್ಪ, ಗೋಪಾಲಗೌಡ ಇದ್ದರು.