ಪ್ರಾಮಾಣಿಕ ಸೇವೆಯಿಂದ ಯಶಸ್ಸು'
ಬಾಗೇಪಲ್ಲಿ: ದಕ್ಷತೆ, ಪ್ರಾಮಾಣಿಕತೆ ಹಾಗೂ ಸಮಯ ಪ್ರಜ್ಞೆ ಮೈಗೂಡಿಸಿಕೊಂಡು ಕರ್ತವ್ಯ ನಿರ್ವಹಿಸಿದಾಗ ಯಶಸ್ಸನ್ನು ಪಡೆಯಬಹುದೆಂದು ನಿವೃತ್ತ ಪೊಲೀಸ್ ಉಪಾಧೀಕ್ಷಕ ಎ.ಬಿ. ದೇವಯ್ಯ ಅಭಿಪ್ರಾಯಪಟ್ಟರು.
ಪಟ್ಟಣದ ಪೊಲೀಸ್ ಠಾಣೆ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಪೊಲೀಸ್ ಠಾಣೆ ಒಂದು ದೇಗುಲವಿದ್ದಂತೆ, ಈ ದೇಗುಲದಲ್ಲಿ ನ್ಯಾಯ ಮತ್ತು ರಕ್ಷಣೆ ಸಿಗುತ್ತದೆ ಎಂಬ ನಂಬಿಕೆಯಿಂದ ಜನರು ಇಲ್ಲಿಗೆ ಬರುತ್ತಾರೆ. ಅವರ ನಂಬಿಕೆ ಹುಸಿಯಾಗದಂತೆ ಪೊಲೀಸರು ಕರ್ತವ್ಯ ನಿರ್ವಹಿಸಬೇಕೆಂದರು.
ಸರ್ಕಲ್ ಇನ್ಸ್ ಪೆಕ್ಟರ್ ವಸಂತ್ ಕುಮಾರ್ ಮಾತನಾಡಿದರು. ಮಾಜಿ ಪುರಸಭಾ ಅಧ್ಯಕ್ಷ ಬಿ.ಆರ್. ನರಸಿಂಹ ನಾಯ್ಡು ಮಾತನಾಡಿದರು. ನಿವೃತ್ತ ಪೊಲೀಸ್ ಅಧಿಕಾರಿ ಎ.ಬಿ. ದೇವಯ್ಯ ಮತ್ತು ಅವರ ಪತ್ನಿ ಧರಣಿ ದೇವಯ್ಯರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪಿ.ಎಸ್.ಗಳಾದ ಮುನಿರೆಡ್ಡಿ, ನಟರಾಜ್, ನಾರಾಯಣ ಸ್ವಾಮಿ, ಪುರಸಭೆ ಸದಸ್ಯ ಬಿ.ಎನ್. ಶ್ರೀನಿವಾಸ್, ಬಿಜೆಪಿ ತಾ.ಅಧ್ಯಕ್ಷ ಗೂಳೂರು ಲಕ್ಷ್ಮೀನಾರಾಯಣ, ಬಿ. ವಿವೆಂಕಟರವಣ, ರಾಮಿರೆಡ್ಡಿ, ರೀಜ್ವಾನ್, ಲಕ್ಷ್ಮೀನಾರಾಯಣರೆಡ್ಡಿ, ಬಿ.ಎಸ್. ನಾಗಭೂಷಣ ಉಪಸ್ಥಿತರಿದ್ದರು.