ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
ಮಾಲೂರು: ಕಬ್ಬಿಗೆ ಬೆಂಬಲ ಬೆಲೆ ಘೋಷಿಸಲು ಸರ್ಕಾರ ತೋರಿದ ಹಠಮಾರಿತನ ಖಂಡಿಸಿ ತಾಲೂಕಿನ ವಿವಿಧ ಸಂಘಟನೆಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದರು. ರಾಜ್ಯ ರೈತ ಸಂಘ, ಕರ್ನಾಟಕ ದಲಿತ ಸಿಂಹ ಸೇನೆ ಹಾಗೂ ಕೆಜೆಪಿ ಸಂಯುಕ್ತವಾಗಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ರೈತ ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಅತ್ಮಹತ್ಯೆ ದಾರಿ ಹಿಡಿಯುತ್ತಿದ್ದಾನೆ. ಆದರೆ ರೈತರ ಸಮಸ್ಯೆಗಳನ್ನು ವಿಧಾನ ಸಭೆಯಲ್ಲಿ ಚರ್ಚಿಸಬೇಕಾದ ಜನಪ್ರತಿನಿಧಿಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಕೆ.ಬಿ. ಮಂಜುನಾಥ್, ಕೆ. ನಾರಾಯಣಗೌಡ, ಮಂಜುನಾಥ್, ಎ.ಎಸ್. ಪ್ರಕಾಶ್, ಕೆಸರೆಗೆರೆ ಸುರೇಶ್, ತಿ. ಶ್ರೀನಿವಾಸ್, ಸತೀಶ್ ಆರಾಧ್ಯ, ವೆಂಕಿ, ಭಾಗ್ಯಮ್ಮ ಇದ್ದರು.