ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅಂಗವಿಕಲರು ಕೀಳರಿಮೆ ತ್ಯಜಿಸಿ ಸ್ವಾವಲಂಬಿ ಜೀವನ ನಡೆಸಿ

Rashmi Kasaragodu
Updated On : 4 Dec 2013, 12:57 pm

ಚಿಕ್ಕಬಳ್ಳಾಪುರ: ಅಂಗವಿಕಲರು ತಮ್ಮಲ್ಲಿನ ಕೀಳರಿಮೆಯನ್ನು ತೊಡೆದು ಹಾಕಿ ಸ್ವಾವಲಂಬಿ ಜೀವನ ನಡೆಸುವಂತೆ ಸಬಲರಾಗಲು ಪ್ರತಿಯೊಬ್ಬರು ಸಹಕಾರ ನೀಡಬೇಕೆಂದು ಪ್ರಭಾರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಅಮರನಾರಾಯಣ ಸಲಹೆ ನೀಡಿದರು.  
ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯ ಆವರಣದಲ್ಲಿರುವ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರೀಕರ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಾಗೂ ಅಂಗವಿಕಲರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸರ್ಕಾರೇತರ ಸಂಸ್ಥೆಗಳು ಹಾಗೂ ಜಿಲ್ಲಾ ಅಂಗವಿಲಕರ ಸಂಘ ಸಂಸ್ಥೆಗಳು ಆಯೋಜಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಗವಿಕಲರ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದು ಸವಲತ್ತುಗಳನ್ನು ಒದಗಿಸುತ್ತಿದೆ.ಇದನ್ನು ಸದುಪಯೋಗಪಡಿಸಿಕೊಂಡು ಅಂಗವಿಕಲರು ಅಭಿವೃದ್ಧಿಯನ್ನು ಹೊಂದಬೇಕು. ಕೀಳರಿಮೆ ಮಾನಸಿಕವಾಗಿ ಕುಗ್ಗಿಸಿ ಇನ್ನೂ ಹಿಂದುಳಿಯುವಂತೆ ಮಾಡುತ್ತದೆ ಎಂದರು.
ಒಂದು ಮನೆಯಲ್ಲಿ ಅಂಗವೈಕಲ್ಯದಿಂದ ಮಗು ಜನಿಸಿದರೆ ಇಡೀ ಕುಟುಂಬದ ನೆಮ್ಮದಿ ಕೆಡುತ್ತದೆ. ಆದರೆ, ಕುಟುಂಬದವರು ಧೈರ್ಯವಾಗಿದ್ದು ಅಂಗವೈಕಲ್ಯ ಸಮಸ್ಯೆಯನ್ನು ಎದುರಿಸುತ್ತಿರುವವರಲ್ಲಿ ಛಲ ಮೂಡಿಸಬೇಕು. ಅಂಗವೈಕಲ್ಯತೆಯನ್ನು ಮರೆತು ಸ್ವಾವಲಂಬಿ ಜೀವನ ನಡೆಸುವ ಸಮರ್ಥರನ್ನಾಗಿಸಬೇಕೆಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್, ಜಿಲ್ಲಾಡಳಿತ ಅಂಗವಿಕಲರ ಸಮಸ್ಯೆಗಳನ್ನು ಬಗೆಹರಿಸಿ ಅಗತ್ಯವಿರುವ ಸವಲತ್ತುಗಳನ್ನು ಒದಗಿಸಲು ಬದ್ಧವಾಗಿದೆ. ಸರ್ಕಾರದ ಆದೇಶದನ್ವಯ ಅಂಗವಿಕಲರಿಗಾಗಿ ಹಣವನ್ನು ಮೀಸಲಿಟ್ಟು ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಕೆ.ಹೆಚ್. ತಮ್ಮೇಗೌಡ ಮಾತನಾಡಿ, ಗರ್ಭಿಣಿಯಾದ ಸಂದರ್ಭದಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು.  ಈಗಾಗಲೇ ತಾಯಿ ಮತ್ತು ಮಗುವಿನ ಆರೈಕೆಗಾಗಿ ಸರ್ಕಾರ ವಿಶೇಷವಾಗಿ ಹೆಚ್ಚು ಗಮನಕೊಟ್ಟಿದ್ದು ಹಂತ ಹಂತವಾಗಿ ಅಂಗವಿಕಲರಾಗಿ ಮಕ್ಕಳು ಹುಟ್ಟುವಂತಹ ಪ್ರಮಾಣವನ್ನು ಕಡಿಮೆ ಮಾಡಲಾಗುತ್ತಿದೆ ಎಂದರು.   ಅಂಗವಿಕಲರಿಗೆ ಬ್ರೇಲ್ಸ್ ಲೇಟ್, ಶ್ರವಣ ಸಾಧನಗಳನ್ನು ಮತ್ತು ಅಂಗವಿಕಲರ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.
ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ, ನಳಿನಿ, ಅನಿತಾ, ವಕೀಲರ ಸಂಘದ ಕಾರ್ಯದರ್ಶಿ ಹೆಚ್.ಸಿ.ಪಾಪಿರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸುರೇಖಾ ವಿಜಯಪ್ರಕಾಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಂಗಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕ ಎಂ. ಮಂಜುಳ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎನ್.ಎಂ. ಶಾಂತರಸ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement