'ಮಕ್ಕಳನ್ನು ಕಡೆಗಣಿಸಬೇಡಿ: ರೇಣುಕಾಬಾಲಚಂದ್ರ
ಬಂಗಾರಪೇಟೆ: ಮಕ್ಕಳನ್ನು ಪೋಷಕರು ಕಡೆಗಣಿಸುತ್ತಿರುವುದು ಶೋಚನೀಯವಾಗಿದೆ ಎಂದು ತಾಪಂ ಅಧ್ಯಕ್ಷೆ ರೇಣುಕಾಬಾಲಚಂದ್ರ ಕಳವಳ ವ್ಯಕ್ತಪಡಿಸಿದರು. ಪಟ್ಟಣದ ಲಯನ್ಸ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ನಡೆದ ತಾಲೂಕು ವಾರು ಮಕ್ಕಳ ಸ್ಥಿತಿಗತಿಗಳ ಬಗ್ಗೆ ಚರ್ಚೆ ಕಾರ್ಯಕ್ರಮದಲ್ಲಿ ಮಾತನಾಡಿ, ಪೋಷಕರು ಮಕ್ಕಳನ್ನು ಸಮಾನರಾಗಿ ಪೋಷಿಸಬೇಕು ಎಂದು ಸಲಹೆ ನೀಡಿದರು.
ತಾಪಂ ಉಪಾಧ್ಯಕ್ಷ ಸಂಪಂಗಿರೆಡ್ಡಿ ಮಾತನಾಡಿ, ಸರ್ಕಾರ ಮಕ್ಕಳ ರಕ್ಷಣೆಗಾಗಿ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಪ್ರಚಾರದ ಕೊರತೆಯಿಂದ ಅವು ತಾಲೂಕಲ್ಲಿ ಅನುಷ್ಠಾನಕ್ಕೆ ಬಂದಿಲ್ಲ ಎಂದು ಖೇದವ್ಯಕ್ತಪಡಿಸಿದರು. ತಾಪಂ ಇಒ ಭಟ್, ಎ. ಹರೀಶ್, ಮಂಜುನಾಥ್ ಇದ್ದರು.