ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಿಸಿ ಕ್ಯಾಮೆರಾ ಅಳವಡಿಸಿ

Rashmi Kasaragodu
Updated On : 4 Dec 2013, 12:57 pm

ಮುಳಬಾಗಲು: ಚಿನ್ನಬೆಳ್ಳಿ ವರ್ತಕರು ತಮ್ಮ ಅಂಗಡಿ ಮುಗ್ಗಟ್ಟಿಗೆ ಸಿಸಿ ಕ್ಯಾಮೆರಾ ಅಳವಡಿಸಲು ಮುಳಬಾಗಲು ಡಿವೈಎಸ್ಪಿ ಟಿ.ಸಿದ್ದಯ್ಯ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಕೃಷ್ಣಪ್ಪ ಸೂಚಿಸಿದರು. ಪಟ್ಟಣದ ಡಿವೈಎಸ್ಪಿ ಕಚೇರಿಯಲ್ಲಿ ಭಾನುವಾರ ಚಿನ್ನಬೆಳ್ಳಿ ವರ್ತಕರ ಸಭೆಯಲ್ಲಿ ಅವರು ಮಾತನಾಡಿ, ಅಪರಾಧ ಪ್ರಕರಣಗಳನ್ನು ಶೀಘ್ರ ಪತ್ತೆ ಹಚ್ಚಲು ಸಿಸಿ ಕ್ಯಾಮೆರಾ ಪ್ರಮುಖ ಪಾತ್ರ ವಹಿಸಲಿದೆ. ಇದನ್ನು ಆಳವಡಿಸಲು ವರ್ತಕರು ಮುಂದಾಗಬೇಕು. ಬೆಲೆ ಬಾಳುವ ಅಭರಣಗಳಿಗೆ ಭದ್ರತಾ ಕ್ರಮ ಕೈಗೊಳ್ಳಬೇಕು ಎಂದರು.
ಚಿನ್ನಬೆಳ್ಳಿ ವರ್ತಕರ ಸಂಘದ ಪೂಲ್ಚಂದ್, ಕಿಶನ್ಲಾಲ್ ಮುಂತಾದವರು ಭಾಗವಹಿಸಿದ್ದರು. ಸಬ್ ಇನ್ಸ್ಪೆಕ್ಟರ್ ಮೇಲ್ವಿನ್ ಫ್ರಾನ್ಸಿಸ್ ವರ್ತಕರು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಿವರಿಸಿದರು.
ಬಸ್ನಿಂದ ಬಿದ್ದು ವ್ಯಕ್ತಿ ಸಾವು
ಬಂಗಾರಪೇಟೆ: ಆಕಸ್ಮಿಕವಾಗಿ ಖಾಸಗಿ ಬಸ್ಸಿಂದ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.ಅಬ್ಬಿಗಿರಿಹೊಸಹಳ್ಳಿ ಗ್ರಾಮದ ಮುನಿಕೃಷ್ಣ 32 ಎಂಬಾತನೆ ಮೃತಪಟ್ಟ ದುರ್ದೈವಿ.
ಮೃತ ಮುನಿಕೃಷ್ಣ ಮಾಲೂರು ತಾಲೂಕಿನ ಮಾಸ್ತಿ ಗ್ರಾಮಕ್ಕೆ ಹೋಗಲು ಪಟ್ಟಣದಿಂದ ಖಾಸಗಿ ಜೋತಿ ಟ್ರಾವೆಲ್ಸ್ ಬಸ್ಸಿನಲ್ಲಿ ಹೋಗುತ್ತಿದ್ದಾಗ ಆನಂದಗಿರಿ ಸಮೀಪ ಬಸ್ ಚ್ಚಲಿಸುವಾಗ ಫುಟ್ಬೋರ್ಡ್ ಮೇಲೆ ನಿಂತಿದ್ದ ಆತ ಆಕಸ್ಮಿಕವಾಗಿ ಕೆಲಗೆ ಬಿದ್ದು ಮೃತಪಟ್ಟಿದ್ದಾನೆ. ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿಕ್ಷಕರಿಗೆ ಪರಿಸರ ಸ್ನೇಹಿ ಕಾರ್ಯಕ್ರಮ
ಚಿಕ್ಕಬಳ್ಳಾಪುರ: ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿ ಆವರಣದಲ್ಲಿರುವ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಡಿ.6 ರಂದು ಜಿಲ್ಲೆಯ ವಿವಿಧ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳು (ಸರ್ಕಾರಿ, ಖಾಸಗಿ) ಶಾಲಾ ಶಿಕ್ಷಕರಿಗೆ ಪರಿಸರ ಸ್ನೇಹಿ ಶಾಲಾ ಪ್ರಶಸ್ತಿ ವಿತರಣೆ ಸ್ಪರ್ಧೆಯ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ, ಪ್ರಾದೇಶಿಕ ಕಚೇರಿ, ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿವಮೊಗ್ಗ ಪರಿಸರ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಪರಿಸರ ಅಧ್ಯಯನ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಜಿಲ್ಲೆಯಲ್ಲಿ ಪರಿಸರ ಸ್ನೇಹಿ ಶಾಲೆಗಳನ್ನು ಗುರುತಿಸಿ ಅವುಗಳಿಗೆ ಪ್ರಶಸ್ತಿ ನೀಡುವ ಮೂಲಕ ಜಿಲ್ಲೆಯ ಶಾಲೆಗಳಲ್ಲಿ ಪರಿಸರ ಸ್ನೇಹಿ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಶಿಕ್ಷಕರು ಭಾಗವಹಿಸಬೇಕೆಂದು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement