ಜೀವನದಲ್ಲಿ ಜಿಗುಪ್ಸೆ; ವ್ಯಕ್ತಿ ಆತ್ಮಹತ್ಯೆ
ಚಿಂತಾಮಣಿ: ವ್ಯಕ್ತಿಯೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೇತನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲ್ಲೂಕಿನ ಗಡಿಭಾಗದ ಅಬ್ಬಲೂಡು ಗ್ರಾಮದ ಕೆಂಚಪ್ಪ(45) ಕಳೆದ ಹಲವು ವರ್ಷಗಳಿಂದ ಮದ್ಯಪಾನಕ್ಕೆ ದಾಸನಾಗಿ ಹಣದ ಕೊರತೆಯಿಂದ ಬೇಸೆತ್ತು ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸಬ್‌ಇನ್ಸ್‌ಪೆಕ್ಟರ್ ರಾಘವೇಂದ್ರ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.