ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ: ಅಶೋಕ್ ಕರೆ

Mainashree
Updated On : 6 Dec 2013, 12:27 pm

ಶಿಡ್ಲಘಟ್ಟ: ಸರ್ಕಾರವು ಗುಣಾತ್ಮಕ ಶಿಕ್ಷಣಕ್ಕೆ ಸಾಕಷ್ಟು ಸವಲತ್ತುಗಳನ್ನು ಒದಗಿಸುತ್ತಿದ್ದು ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಮುಂದಾಗಬೇಕೆಂದು ಜಂಗಮಕೋಟೆ ಕ್ಲಸ್ಟರ್‌ನ ಸಿಆರ್ಪಿ ಜೆ.ಬಿ ಅಶೋಕ್ ಹೇಳಿದರು.
ತಾಲೂಕಿನ ಜಂಗಮಕೋಟೆ ಹೋಬಳಿಯ ಸುಗಟೂರು ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ಮಾತನಾಡಿ, ಶಿಕ್ಷಣದ ಪ್ರಗತಿಗಾಗಿ ಸರ್ಕಾರವು ಬಿಸಿಯೂಟ, ಉಚಿತ ಸಮವಸ್ತ್ರ. ಪಠ್ಯಪುಸ್ತಕ, ನೋಟ್‌ಪುಸ್ತಕ, ಬೈಸಿಕಲ್‌ಗಳ ವಿತರಣೆಯಂತಹ ಯೋಜನೆಗಳನ್ನು ಜಾರಿಗೆ ತಂದಿದೆ. ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ನಿರಂತರವಾಗಿ ಗೈರು ಹಾಜರಾಗದಂತೆ ಕಳುಹಿಸಿ ಮಕ್ಕಳ ಕಲಿಕಾ ಪ್ರಗತಿಯೆಡೆ ಗಮನಹರಿಸಬೇಕು ಎಂದು ವಿವರಿಸಿದರು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಆರ್.ನಾಗೇಶ್, ಉಪಾಧ್ಯಕ್ಷೆ ಬಿ.ಆರತಿ, ಸದಸ್ಯ ಎನ್.ಪಿ.ನಾಗರಾಜು, ಚಂದ್ರಪ್ಪ, ಶಂಕರಪ್ಪ, ನಾಗರಾಜು, ಮಾಜಿ ಅಧ್ಯಕ್ಷ ಎಂ.ಕೃಷ್ಣಪ್ಪ, ಬಚ್ಚೇಗೌಡ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement