ಸಮಾನತೆಯ ಹರಿಕಾರ ಕನಕ: ಅಂಜನಿ ಸೋಮಣ್ಣ
ಟೇಕಲ್: ಕನಕದಾಸರು ಸಮಾಜದ ಕೆಳವರ್ಗದ ಜನತೆಗೆ ಸಮಾನತೆ ತರುವ ವಿಚಾರದಲ್ಲಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದರು ಎಂದು ರಾಜ್ಯ ಕುರುಬ ಸಂಘದ ನಿರ್ದೇಶಕ ಅಂಜನಿ ಸೋಮಣ್ಣ ಹೇಳಿದರು. ಮಾಸ್ತಿ ಗ್ರಾಮದಲ್ಲಿ ಡಾ. ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಕೃಪಾ ಪೋಷಿತ ನಾಟಕ ಮಂಡಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೋಲಾರ ಹಾಗೂ ಕನಕ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಕನಕ ಜಯಂತ್ಯುತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನಕದಾಸರು ಒಂದು ವರ್ಗಕ್ಕೆ ಸೀಮಿತವಾಗಿಲ್ಲವೆಂದು. ಅವರ ಆಚಾರ ವಿಚಾರಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡಿದಾಗ ಬದುಕು ಸಾರ್ಥಕವಾಗುತ್ತದೆ ಎಂದು ಹೇಳಿದರು.
ತಾಲ್ಲೂಕು ಬಿಜೆಪಿ ಅಧ್ಯಕ್ಷ ಸೊಣ್ಣೂರು ವೆಂಕಟೇಶ್ ಮಾತನಾಡಿದರು. ಜಿಪಂ ಮಾಜಿ ಅಧ್ಯಕ್ಷೆ ಮಂಜುಳಾ ವೆಂಕಟೇಶ್, ಸದಸ್ಯೆ ಯಶೋಧಮ್ಮ, ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಚ್. ಚನ್ನರಾಯಪ್ಪ, ಎಚ್.ವಿ.ಶ್ರೀನಿವಾಸ್, ಸಿ. ರಾಜಣ್ಣ, ರಾಮಪ್ಪ, ಚಂದ್ರಪ್ಪ, ಬಿ.ಕೆ. ನಾರಾಯಣಸ್ವಾಮಿ, ಗ್ರಾಪಂ ಸದಸ್ಯ ಶಿವಕುಮಾರ್, ವಕೀಲ ಜೆ.ಸಿ. ಹನುಮಂತು ಇದ್ದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕುರುಬ ಸಮುದಾಯದ ಮುಖಂಡರನ್ನು ಸನ್ಮಾನಿಸಲಾಯಿತು. ಮಾಸ್ತಿ ಗ್ರಾಮದ ವಿವಿಧ ಬೀದಿಗಳಲ್ಲಿ ಕನಕದಾಸರ ಭಾವಚಿತ್ರವನ್ನು ಮೆರವಣಿಗೆ ನಡೆಸಲಾಯಿತು.