ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅರಣ್ಯ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರ ಆಯ್ಕೆ

Rashmi Kasaragodu
Updated On : 7 Dec 2013, 12:32 pm

ಚಿಂತಾಮಣಿ: ಅರಣ್ಯ ನೌಕರರ ಕ್ಷೇಮಾಭಿವೃದ್ಧಿಗಾಗಿ ನೀಡಿರುವ ಸ್ಥಾನಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸುವುದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಎಸ್.ಎನ್. ಜಯಚಂದ್ರ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಸಾಮಾನ್ಯ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಮಾಡಿದ ನಂತರ ಮಾತನಾಡಿ, ಅರಣ್ಯ ನೌಕರರ ವಿವಿಧ ಬೇಡಿಕೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆ ಮೇಲಾಧಿಕಾರಿಗಳ ಜೊತೆ ಚರ್ಚಿಸಿ ಸರ್ಕಾರದಿಂದ ದೊರೆಯುವ ಸೌಲಭ್ಯ ಕಲ್ಪಿಸಿಕೊಡುವುದಾಗಿ ಹೇಳಿದರು. ಉಪವಲಯದ ಅರಣ್ಯಾಧಿಕಾರಿಗಳ ಸಂಘದ ಉಪಾಧ್ಯಕ್ಷರಾಗಿ ಗೌರಬಿದನೂರು ಪ್ರಾದೇಶಿಕ ಅರಣ್ಯ ವಲಯ ರಹಮತ್ ಉಲ್ಲಾ, ಪ್ರಾದೇಶಿಕ ಅರಣ್ಯವಲಯ ಗುಡಿಬಂಡೆ ಕಾರ್ಯದರ್ಶಿ ಎಸ್. ಮಂಜುನಾಥ್, ಪ್ರಾದೇಶಿಕ ಅರಣ್ಯ ವಲಯ ಚಿಕ್ಕಬಳ್ಳಾಪುರ ಖಜಾಂಚಿ ವೈ.ಎಂ. ಬಾಲಶಂಕರ್, ಪ್ರಾದೇಶಿಕ ಅರಣ್ಯ ವಲಯ ಶಿಡ್ಲಘಟ್ಟ ಸಂಘಟನಾ ಕಾರ್ಯದರ್ಶಿ ಸೈಯ್ಯದ್ ರಹಮತ್ ಅಲಿ ಶಂಷಿ, ಜಲಾಯನ ಅಭಿವೃದ್ಧಿ ಜಂಟಿ ಕಾರ್ಯದರ್ಶಿಯಾಗಿ ಶ್ರೀನಿವಾಸ್ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement