ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಇಂದು ಯುವ ಜನೋತ್ಸವ

Rashmi Kasaragodu
Updated On : 7 Dec 2013, 12:31 pm

ಚಿಕ್ಕಬಳ್ಳಾಪುರ: ನಗರದ ಸರ್.ಎಂ.ವಿ.ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.7 ರಂದು ಬೆಳಗ್ಗೆ 11.30 ಗಂಟೆಗೆ ಜಿಲ್ಲಾ ಮಟ್ಟದ ಯುವ ಜನೋತ್ಸವ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಯುವಜನೋತ್ಸವದಲ್ಲಿ ಭಾಗವಹಿಸುವವರು 15 ರಿಂದ 35 ವರ್ಷದೊಳಗಿರಬೇಕು. ಜನಪದ ನೃತ್ಯ, ಜನಪದ ಗೀತೆ, ಏಕಪಾತ್ರಾಭಿನಯ, ಇಂಗ್ಲಿಷ್ ಅಥವಾ ಹಿಂದಿ ಶಾಸ್ತ್ರೀಯ ಗಾಯನ (ಕರ್ನಾಟಕ), ಶಾಸ್ತ್ರೀಯ ಗಾಯನ (ಹಿಂದೂಸ್ಥಾನಿ), ಶಾಸ್ತ್ರೀಯ ವಾದ್ಯ ಸಿತಾರ್, ತಬಲಾ, ಕೊಳಲು, ವೀಣೆ, ಮೃದಂಗ, ಹಾರ್ಮೋನಿಯಂ, ಗಿಟಾರ್, ಶಾಸ್ತ್ರೀಯ ನೃತ್ಯ-ಭರತ ನಾಟ್ಯ, ಓಡಿಸ್ಸಿ, ಮಣಿಪುರಿ, ಕುಚ್ಚಿಪುಡಿ, ಕಥಕ್, ಜತೆಗೆ ಆಶುಭಾಷಣ ಸ್ಪರ್ಧೆಗಳು ನಡೆಯಲಿವೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಡಿ.7 ರಂದು ಬೆಳಗ್ಗೆ 11.30ಕ್ಕೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್.ಎಂ.ವಿ.ಜಿಲ್ಲಾ ಕ್ರೀಡಾಂಗಣ, ಚಿಕ್ಕಬಳ್ಳಾಪುರದ ಕಚೇರಿಯಲ್ಲಿ ವರದಿ ಮಾಡಿಕೊಳ್ಳಬೇಕು. ಸ್ಪರ್ಧಾಳುಗಳಿಗೆ ಪ್ರಯಾಣ ಭತ್ಯೆ/ ದಿನ ಭತ್ಯೆಯನ್ನು ಇಲಾಖಾ ವತಿಯಿಂದ ನೀಡಲಾಗುವುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಸಿಕ ಕೆಡಿಪಿ ಸಭೆ
ಚಿಕ್ಕಬಳ್ಳಾಪುರ: ತಾಲೂಕಿನ ಚದಲಪುರ ಕ್ರಾಸ್ ಬಳಿ ಇರುವ ಹಳೆಯ ಜಿಪಂ ಸಭಾಂಗಣದಲ್ಲಿರುವ ಡಿ.11 ರಂದು ಬೆಳಗ್ಗೆ 11 ಗಂಟೆಗೆ ಮಾಸಿಕ ಕೆಡಿಪಿ ಸಭೆ ಆಯೋಜಿಸಲಾಗಿದೆ. ಜಿಪಂ ಅಧ್ಯಕ್ಷ ಎಸ್.ಎನ್.ಚಿನ್ನಪ್ಪ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೀಲಾ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಚೇರಿ ವರ್ಗಾವಣೆ
ಚಿಕ್ಕಬಳ್ಳಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಾಲ ನ್ಯಾಯ ಮಂಡಳಿ ಕಚೇರಿ ನೂತನ ಜಿಲ್ಲಾಡಳಿತ ಭವನದ ಬಿ.4-1 ನೇ ಮಹಡಿಗೆ ವರ್ಗಾವಣೆಯಾಗಿದೆ.
ಇಂದು ವಿಚಾರಗೋಷ್ಠಿ
ಚಿಕ್ಕಬಳ್ಳಾಪುರ: ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಡಿ.7 ರಂದು ಬೆಳಗ್ಗೆ 9.30 ಗಂಟೆಗೆ ಕನ್ನಡ ಭಾಷೆ, ಚುಟುಕು ಸಾಹಿತ್ಯ ಮತ್ತು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಕುರಿತ ವಿಚಾರಗೋಷ್ಠಿ ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಪಾತಮುತ್ತಕಹಳ್ಳಿ ಚಲಪತಿಗೌಡ, ಕನ್ನಡ ಕವಿವರ್ಯರ ಕುರಿತು ಅಭಿಮಾನ ಮೂಡಿಸುವ ಚುಟುಕು ಸಾಹಿತ್ಯವನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಎಂ.ಆರ್.ನಾಗರಾಜರಾವ್, ಗೋವಿಂದರಾಜು, ನಾಗಭೂಷಣ್ ರೆಡ್ಡಿ, ರಮೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement