ದಲಿತರಿಗಾಗಿ ಹೋರಾಡಿದ ಮಹಾನ್ ವ್ಯಕ್ತಿ ಅಂಬೇಡ್ಕರ್
ಚಿಂತಾಮಣಿ: ನೆರೆಹೊರೆಯ ಎಲ್ಲಾ ಮಕ್ಕಳು ಒಂದೇ ಶಾಲೆಯಲ್ಲಿ ಯಾವ ಭೇದವೂ ಇಲ್ಲದೆ ಸಮಾನ ಶಿಕ್ಷಣ ವ್ಯವಸ್ಥೆ ಜಾರಿಗೆಯಾಗಬೇಕೆಂದು ನಗರಸಭಾ ಸದಸ್ಯ ಶ್ರೀರಾಮಪ್ಪ ಕರೆ ನೀಡಿದರು.
ನಗರದ ವಿನೋಭ ಕಾಲೋನಿಯಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ಅಂಬೇಡ್ಕರ್ ಭಾವಚಿತ್ರಕ್ಕೆ ಹೂಮಾಲೆ ಹಾಕಿ ದೀಪ ಬೆಳಗಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಹಾಗೂ ದಲಿತರ ಹಕ್ಕುಗಳಿಗಾಗಿ ಹೋರಾಟ ನಡೆಸಿ ಸಂವಿಧಾನ ರಚಿಸಿದ ಬಾಬಾ ಸಾಬ್ ಅಂಬೇಡ್ಕರ್ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ನಂತರ ದಲಿತ ಹಿರಿಯ ಮುಖಂಡ ರಂಗಪ್ಪ ಮಾತನಾಡಿ ಮಕ್ಕಳು ಶಿಕ್ಷಣ ಪಡೆದು ಸಮಾಜದಲ್ಲಿ ನವ ನಿರ್ಮಾಣಕ್ಕೆ ಮುಂದಾಗಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೇಲ್ವಿಚಾರಕ ಕೃಷ್ಣಪ್ಪ ಬಡ ಮಕ್ಕಳಿಗೆ ತಟ್ಟೆ, ಲೋಟ ವಿತರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಮಾಂಜಿ, ಜನಾರ್ದನ್, ಕೃಷ್ಣ, ಓಬಲೇಶ್, ಕೆ.ಜಿ. ಸಿದ್ದಣ್ಣ, ವೆಂಕಟೇಶ್,ಪಾಪಣ್ಣ ಮತ್ತಿತರರು ಭಾಗವಹಿಸಿದ್ದರು.