ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಮಾನ ಶಿಕ್ಷಣ ವ್ಯವಸ್ಥೆಗೆ ಒತ್ತಾಯಿಸಿ ರ್ಯಾಲಿ

Rashmi Kasaragodu
Updated On : 7 Dec 2013, 12:26 pm

ಚಿಕ್ಕಬಳ್ಳಾಪುರ: ಡಾ.ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನದ ಪ್ರಯುಕ್ತ ದಲಿತ ಸಂಘರ್ಷ ಸಮಿತಿ ಮತ್ತು ಕರ್ನಾಟಕ ಜನಶಕ್ತಿ ಸಂಘಟನೆಯ ಕಾರ್ಯಕರ್ತರು ಸಮಾನ ಶಿಕ್ಷಣ ವ್ಯವಸ್ಥೆಗೆ ಒತ್ತಾಯಿಸಿ ಬೃಹತ್ ರ್ಯಾಲಿ ನಡೆಸಿದರು. ನಗರದ ಪ್ರವಾಸಿಮಂದಿರದಿಂದ ಪ್ರಮುಖ ಬೀದಿಗಳಲ್ಲಿ ಭಿತ್ತಿ ಫಲಕಗಳನ್ನು ಹಿಡಿದು ಸಾಗಿದ ಕಾರ್ಯಕರ್ತರು ಉಪ ವಿಭಾಗಾಧಿಕಾರಿ ಶಾಂತಲಾ ಅವರಿಗೆ ಮನವಿ ಸಲ್ಲಿಸಿದರು. ಏಕರೂಪ ಶಿಕ್ಷಣ ಜಾರಿ, ಶಿಕ್ಷಕರ ನೇಮಕಾತಿ, ಸರ್ಕಾರಿ ಶಾಲೆಗಳನ್ನು ಮುಚ್ಚದೇ ಮೂಲ ಸೌಲಭ್ಯಗಳನ್ನು ಒದಗಿಸಬೇಕೆನ್ನುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು. ವಿಚಾರ ಸಂಕಿರಣ: ರ್ಯಾಲಿಯ ನಂತರ ನಗರದ ಅಂಬೇಡ್ಕರ್ ಭವನದಲ್ಲಿ ಏಕರೂಪ ಶಿಕ್ಷಣ, ಅಂಬೇಡ್ಕರ್ ಅವರ ಚಿಂತನೆಗಳ ಕುರಿತು ವಿಚಾರ ಸಂಕಿರಣ ನಡೆಯಿತು. ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆಯ ವಿ.ಪಿ. ನಿರಂಜನಾರಾಧ್ಯ ಮಾತನಾಡಿ, ಶೈಕ್ಷಣಿಕ ರಂಗವನ್ನು ರಾಷ್ಟ್ರೀಕರಣಗೊಳಿಸಬೇಕು. ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು. ಜತೆಗೆ ಏಕರೂಪ ಶಿಕ್ಷಣ ಪದ್ಧತಿಯನ್ನು ಜಾರಿಗೆಗೆ ತರಬೇಕೆಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಕೋಡಿರಂಗಪ್ಪ, ದಲಿತ ಸಂಘರ್ಷ ಸಮಿತಿಯ ಕೆ.ಸಿ. ರಾಜಾಕಾಂತ್, ಬಿ.ವಿ. ಆನಂದ್, ಕರ್ನಾಟಕ ಜನಶಕ್ತಿಯ ಅಧ್ಯಕ್ಷ ಎನ್. ವೆಂಕಟೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement