ಅಂಬೇಡ್ಕರ್ ಪರಿನಿರ್ವಾಣ ದಿನ
ಚಿಕ್ಕಬಳ್ಳಾಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ರವರ 57ನೇ ಪುಣ್ಯತಿಥಿ ಪ್ರಯುಕ್ತ ನಗರದ ಎಂ.ಜಿ. ರಸ್ತೆಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ವಿದ್ಯಾರ್ಥಿ ನಿಲಯದ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ರವರ ಪ್ರತಿಮೆಗೆ ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್ ಮಾಲಾರ್ಪಣೆ ಮಾಡಿದರು. ನಂತರ ಮಾತನಾಡಿದ ಅವರು, ಅಂಬೇಡ್ಕರ್ ಎಲ್ಲಾ ವರ್ಗದ ಜನರ ಧ್ವನಿಯಾಗಿದ್ದು ಅವರು ದೇಶಕ್ಕೆ ನೀಡಿದ ಸಂವಿಧಾನ ದೊಡ್ಡ ಕೊಡುಗೆಯಾಗಿದೆ ಎಂದರು. ಜಿಲ್ಲಾ ರಕ್ಷಣಾಧಿಕಾರಿ ಎನ್. ಶಿವಪ್ರಸಾದ್ ಮಾತಾನಾಡಿ, ಅಂಬೇಡ್ಕರ್ರವರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಆರಂಭದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ನೋಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ನೆಲ್ಸನ್ ಮಂಡೇಲರವರ ಅತ್ಮಕ್ಕೆ ಶಾಂತಿ ಕೋರಲಾಯಿತು. ಈ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ, ತಾಪಂ ಅಧ್ಯಕ್ಷ ಕೃಷ್ಣಮೂರ್ತಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಡಾ. ನಾಗಾರಾಜಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಜಿತ್ ಪ್ರಸಾದ್ ಇದ್ದರು.