ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಆದಿ ಶ್ರೀ ಸಂಸ್ಮರಣೆ

Mainashree
Updated On : 8 Dec 2013, 11:12 am

ಕೋಲಾರ: ಚಿಕ್ಕಬಳ್ಳಾಪುರದಲ್ಲಿ ಡಿ.15 ರಂದು ನಡೆಯಲಿರುವ ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧಿಪತಿ ದಿವಂಗತ ಶ್ರೀ ಬಾಲಗಂಗಾಧರನಾಥಸ್ವಾಮೀಜಿಯವರ ಗುರುಸಂಸ್ಮರಣೆ ಕಾರ್ಯಕ್ರಮಕ್ಕೆ ಭಕ್ತರನ್ನು ಕರೆದೊಯ್ಯಲು ವಕ್ಕಲಿಗರ ಸಂಘದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ನಗರದ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ನಿರ್ಮಲಾನಂಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ  ಕಾರ್ಯಕ್ರಮ ಹಮ್ಮಿಕೊಂಡಿದ್ದು ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂಬ ಉದ್ದೇಶದಿಂದ ಕಾರ್ಯಕ್ರಮಕ್ಕೆ ಭಕ್ತರನ್ನು ಕರೆದುಕೊಂಡು ಹೋಗಲು ಉಚಿತ ಬಸ್ ವ್ಯವಸ್ಥೆ ಮಾಡಲು ಭಾನುವಾರ ನಡೆದ ಕೋಲಾರ ಜಿಲ್ಲಾ ಒಕ್ಕಲಿಗರ ಸಂಘದ ಸಭೆಯಲ್ಲಿ ತೀರ್ಮಾನಿಲಾಯಿತು. ಶ್ರೀ ಬಾಲಗಂಗಾಧರನಾಥಸ್ವಾಮೀಜಿಯವರ ಗುರುಸಂಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದರಿಂದ ವಕ್ಕಲಿಗ ಸಂಘದ ಮುಖಂಡರು ಪೂರ್ವಭಾವಿ ಸಭೆ ನಡೆಸಿ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಕೆ.ವಿ. ಶಂಕರಪ್ಪ, ಡಾ.ಕೆ.ಎಂ. ಮೌನಿ, ಉಪಾಧ್ಯಕ್ಷ ವಿ. ಕೃಷ್ಣಾರೆಡ್ಡಿ, ನಿರ್ದೇಶಕರಾದ ಉರಿಗಿಲಿ ರುದ್ರಸ್ವಾಮಿ, ಎಸ್.ಆರ್. ಮುರಳಿಗೌಡ, ಡಿ. ವೆಂಕಟರಾಮೇಗೌಡ, ಡಿ. ಕೃಷ್ಣಪ್ಪ, ವೀರವೆಂಕಟಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement