ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಬಿಜೆಪಿ ಗೆಲುವು; ವಿಜಯೋತ್ಸವ ಆಚರಣೆ

Mainashree
Updated On : 8 Dec 2013, 11:14 am

ಬಾಗೇಪಲ್ಲಿ: ನಾಲ್ಕು ರಾಜ್ಯಗಳ ಫಲಿತಾಂಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಪಟ್ಟಣದ ಎಚ್.ಎನ್. ವೃತ್ತದಿಂದ ಪ್ರಮುಖ ರಸ್ತೆಯಲ್ಲಿ ಬಿಜೆಪಿ ಪಕ್ಷದ ಬಾವುಟ ಹಿಡಿದು ಹೊರಟ ಬಿಜೆಪಿ ಕಾರ್ಯಕರ್ತರು ನರೇಂದ್ರ ಮೋದಿ ಹಾಗೂ ಬಿಜೆಪಿಗೆ ಜಯಕಾರ ಕೂಗಿದರು. ಮಂಡಲ ಅಧ್ಯಕ್ಷ ಗೂಳೂರು ಲಕ್ಷ್ಮೀನಾರಾಯಣ ಮಾತನಾಡಿ, ಮತದಾರರು ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ವಿಜಯೋತ್ಸವದಲ್ಲಿ ಜಿ.ಎಸ್. ಚೌಡರೆಡ್ಡಿ, ಪಿ. ವೆಂಕಟರಾಯಪ್ಪ, ಬಾಬಾಜಾನ್ ಮಂಜುಳಾ ಬಾಯಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement