ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಬಿಜೆಪಿ ಗೆಲವು: ಕಾರ್ಯಕರ್ತರ ಹುರುಪು

Vishwanath S
Updated On : 10 Dec 2013, 12:44 pm

ಕನ್ನಡಪ್ರಭ ವಾರ್ತೆ  ಕೋಲಾರ   ಡಿ.9
ಉತ್ತರ ಭಾರತ ನಾಲ್ಕು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿರುವುದಕ್ಕೆ ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
 ರಾಜಸ್ತಾನ, ಮಧ್ಯಪ್ರದೇಶ, ದೆಹಲಿ ಮತ್ತು ಛತ್ತೀಸ್‌ಗಡ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿರುವುದರಿಂದ ಕಾರ್ಯಕರ್ತರು ನಗರದ ಮೆಕ್ಕೆ ವೃತ್ತದಲ್ಲಿ ವಿಜಯೋತ್ಸವ ಆಚರಿಸಿ ಜನರಿಗೆ ಲಾಡು ಹಂಚಿದರು. ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿಯ ನಾಯಕತ್ವದ ಮೇಲೆ ಮತದಾರರು ವಿಶ್ವಾಸವಿಟ್ಟು ಬಿಜೆಪಿ ಗೆಲ್ಲಿಸಿದ್ದಾರೆಂದು ಮುಖಂಡರು ತಿಳಿಸಿದರು.
 ರಾಜ್ಯ ಅಲ್ಪಸಂಖ್ಯಾತರ ಮೋರ್ಚಾದ ರಾಜ್ಯ ಕಾರ್ಯದರ್ಶಿ ಜಮೀಲ್ ಖಾನ್, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ವಿಜಯಕುಮಾರ್, ತಾಲೂಕು ಅಧ್ಯಕ್ಷ ಚಿನ್ನಾಪುರ ನಾರಾಯಣಸ್ವಾಮಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕೆಂಬೋಡಿ ನಾರಾಯಣಸ್ವಾಮಿ, ನಗರ ಘಟಕದ ಉಪಾಧ್ಯಕ್ಷ ಸುರೇಶ್, ಪ್ರಧಾನ ಕಾರ್ಯದರ್ಶಿ ಸುರೇಶ್, ಮಹಿಳಾ ಮೋರ್ಚಾದ ಶಕುಂತಲಾ ದೀಕ್ಷಿತ್ ಮತ್ತಿತರರು ಇದ್ದರು.
ಗೌರಿಬಿದನೂರುನಲ್ಲಿ ಸಂಭ್ರಮ:  ಬಿಜೆಪಿ ಪಕ್ಷ ಜಯಭೇರಿ ಬಾರಿಸಿದ ಪ್ರಯುಕ್ತ ಪಕ್ಷದ ಕಾರ್ಯಕರ್ತರು ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಜಿಲ್ಲಾಧ್ಯಕ್ಷ ಎನ್.ಎಂ. ರವಿನಾರಾಯಣರೆಡ್ಡಿ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿ ಜಯಘೋಷಗಳನ್ನು ಕೂಗಿದರು. ಸಿಹಿ ಹಂಚಿ ಹರ್ಷ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement