'ಅರ್ಥಪೂರ್ಣ ಆಚರಣೆಯಾಗಲಿ'
ಚಿಂತಾಮಣಿ: ಪ್ರತಿಭಾ ಕಾರಂಜಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಿದಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಹೊರ ಜಗತ್ತಿಗೆ ಪ್ರದರ್ಶಿಸಲು ಸಾಧ್ಯ ಎಂದು ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಉಪಾಧ್ಯಕ್ಷ ಆರ್. ವೆಂಕಟರಮಣಾರೆಡ್ಡಿ ಹೇಳಿದರು.
ನಗರದ ಡಿಲಿಜಿಯನ್ಸ್ ಸಂಯುಕ್ತ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಹೊರ ತರಲು ಸರ್ಕಾರ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತಂದಿದೆ ಎಂದರು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಜನಾರ್ದನರೆಡ್ಡಿ ಮಾತನಾಡಿ, ಮಕ್ಕಳ ಪ್ರತಿಭೆಯನ್ನು ಶಿಕ್ಷಕರು ಗುರುತಿಸಿ ಮಾರ್ಗದರ್ಶನ ನೀಡಿದಲ್ಲಿ ಮುಂದೆ ಸಮಾಜದ ಗಣ್ಯ ವ್ಯಕ್ತಿಗಳಾಗಲು ಸಾಧ್ಯವೆಂದದರು.
ಬಿ.ಎಚ್. ಮಂಜುನಾಥ್ ಮಾತನಾಡಿದರು. ಶಿಕ್ಷಣ ಸಂಯೋಜಕ ಕೃಷ್ಣಮೂರ್ತಿ, ಓಂಕಾರಪ್ಪ, ಮುಖ್ಯಶಿಕ್ಷಕ ಸುಬ್ಬಾರೆಡ್ಡಿ, ಶಿಕ್ಷಕರಾದ ನರಸಿಂಹಪ್ಪ, ಶ್ರೀನಿವಾಸ್, ಶಿವಕುಮಾರ್, ನಾಗರಾಜ್ ಇದ್ದರು. ನಗರ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ವೇಷ ಭೂಷಣಗಳಿಂದ ಭಾಗವಹಿಸಿದ್ದು ಆಕರ್ಷಣೀಯವಾಗಿತ್ತು.