ವೃತ್ತ ನಿರೀಕ್ಷಕರ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ
ಕೆಜಿಎಫ್: ಇತ್ತೀಚೆಗೆ ಕೋಲಾರದಲ್ಲಿ ಬಜರಂಗದಳ ಕಾರ್ಯಕರ್ತರೊಬ್ಬರ ಮೇಲೆ ಕಸಬಾ ಪೊಲೀಸ್ ಠಾಣಾ ವೃತ್ತನಿರೀಕ್ಷಕ ಶಿವಕುಮಾರ್ ಹಲ್ಲೆ ನಡೆಸಿ ದೌರ್ಜನ್ಯವೆಸಗಿರುವುದನ್ನು ಖಂಡಿಸಿ ಕೆಜಿಎಫ್‌ನಲ್ಲಿ ಭಜರಂಗದಳ ಕಾರ್ಯಕರ್ತರು ನಾಡಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ವೃತ್ತನಿರೀಕ್ಷಕ ಶಿವಕುಮಾರ್ ಅವರನ್ನು ಸೇವೆಯಿಂದ ಅಮಾನತು ಪಡಿಸಬೇಕು ಎಂದು ಒತ್ತಾಯಿಸಿದರು.
ಅಂತರಗಂಗೆ ಜಾತ್ರೆಯಲ್ಲಿ ಅಳವಡಿಸಿದ್ದ ಭಜರಂಗದಳ ತೋರಣಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಿದ್ದನ್ನು ಖಂಡಿಸಿ ಕೋಲಾರ ಭಜರಂಗದಳ ಕಾರ್ಯಕರ್ತರು ಧರಣಿ ನಡೆಸಿದ ವೇಳೆ ವೃತ್ತನಿರೀಕ್ಷಕ ಶಿವಕುಮಾರ್ ಭಜರಂಗದಳ ಕಾರ್ಯಕರ್ತ ಅಪ್ಪಿ ಎಂಬುವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯವೆಸಗಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದರು.
ಶಿವಕುಮಾರ್‌ರನ್ನು ಈ ಕೂಡಲೇ ಸೇವೆಯಿಂದ ಅಮಾನತು ಪಡಿಸಬೇಕು ಎಂದು ಒತ್ತಾಯಿಸಿ ಕಾರ್ಯಕರ್ತರು ಮತ್ತು ಮುಖಂಡರು ನಾಡಕಚೇರಿ ಉಪತಹಸೀಲ್ದಾರ್ ಇನಾಯತ್ತುಲ್ಲಾಖಾನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಜಿಲ್ಲಾ ಸಂಚಾಲಕ ಯಶ್ವಂತ್, ಕಾರ್ಯಕರ್ತರಾದ ರೋಹಿತ್, ರಮೇಶ್, ವಿವೇಕ್, ಕುಮಾರ್, ದಿನೇಶ್, ಪ್ರಭಾಕರ್ ಸೇರಿದಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಾಟಾ ಗೋಪಾಲ್ ಮತ್ತಿತರರು ಹಾಜರಿದ್ದರು.