ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

15 ರಂದು ಗುರುಸಂಸ್ಮರಣಾ ಕಾರ್ಯಕ್ರಮ

Srinivasa Murthy VN
Updated On : 12 Dec 2013, 1:17 am

ಚಿಕ್ಕಬಳ್ಳಾಪುರ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಠದ ವತಿಯಿಂದ ಡಿ.15 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಗುರುಸಂಸ್ಮರಣಾ ಮತ್ತು ಭಕ್ತಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ತಿಳಿಸಿದರು.
ಇಲ್ಲಿನ ಶಾಖಾ ಮಠದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶ್ರೀ ಆದಿಚುಂಚನಗಿರಿ ಮಠವು ಸುಮಾರು 7 ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಹೊಸದಾಗಿ ನವಗ್ರಹ ಗುಡಿ ನಿರ್ಮಿಸಿದ್ದು ಡಿ.15 ರಂದು ಶ್ರೀ ಗುರುಗಳ ಪ್ರತಿಮೆ ಸ್ಥಾಪನೆ, ಹೋಮ ಹವನ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಸೇರಿದಂತೆ ವಿವಿಧೆಡೆಯಿಂದ ಸುಮಾರು 1 ಲಕ್ಷಕ್ಕೂ ಹೆಚ್ಚು ಭಕ್ತರು ಭಾಗವಹಿಸಲಿದ್ದಾರೆ ಎಂದರು.
ಮೊದಲಿಗೆ ನಗರದ ಶ್ರೀ ಮರಳು ಸಿದ್ದೇಶ್ವರನಾಥ ಸ್ವಾಮಿ ದೇವಾಲಯದ ಮುಂಭಾಗದಿಂದ ನಡೆಯುವ ಆದಿಚುಂಚನಗಿರಿ ಮಠದ 71 ನೇ ಪೀಠಾಧಿಪತಿಗಳಾದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಪ್ರತಿಮೆಯ ಮೆರವಣಿಗೆಗೆ ಡಿ.15 ರಂದು ಬೆಳಿಗ್ಗೆ 9.30 ಕ್ಕೆ ಮಹಾಸಂಸ್ಥಾನದ 72 ನೇ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಗೆ ಸಾಥ್ ನೀಡಲಿವೆ. ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ಹಿಂಭಾಗ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ, ಕೇಂದ್ರ ಸಚಿವರಾದ ಕೆ.ಹೆಚ್. ಮುನಿಯಪ್ಪ, ವೀರಪ್ಪ ಮೊಯ್ಲಿ ಮತ್ತಿತರರು ಭಾಗವಹಿಸುವರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಕೆ. ಸುಧಾಕರ್, ಎಸ್ ಜೆಸಿಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಮುನಿಕೆಂಚೇಗೌಡ, ಪ್ರೊ. ಶಿವರಾಮರೆಡ್ಡಿ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement