ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

'ಚುನಾವಣಾ ಗುರುತಿನ ಚೀಟಿ ವಿತರಿಸಲಾಗಿದೆ'

Srinivasa Murthy VN
Updated On : 13 Dec 2013, 12:13 pm

ಕೆಜಎಫ್: ಬಿಎಲ್‌ಒಗಳ ಮುಖಾಂತರ ಚುನಾವಣಾ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ವಿ. ಬಾಲಚಂದ್ರ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾರ್ವಜನಿಕರ ಆರೋಪ ಸತ್ಯಕ್ಕೆ ದೂರವಾದದ್ದು ಎಂದರು.
ಕೋಲಾರ ಜಿಲ್ಲಾಧಿಕಾರಿಗಳ ಆದೇಶದಂತೆ ನಗರಸಭೆಯಿಂದ ಕಳೆದ ನವೆಂಬರ್‌ನಿಂದ ನಗರಸಭೆಯ ಎಲ್ಲಾ ನೌಕರರು ಆಸ್ತಿ ತೆರಿಗೆ ವಸೂಲಾತಿಗೆ ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮನೆ ಮನೆಗೆ ತೆರಳಿ ತೆರಿಗೆ ಸಂಗ್ರಹ ಸಪ್ತಾಹದಲ್ಲಿ ಪಾಲ್ಗೊಳ್ಳುತ್ತಾರೆ. ಅಂತಹ ಸಮಯದಲ್ಲಿ ಕೋಲಾರ ಜಿಲ್ಲಾ ಉಪ ವಿಭಾಗಾಧಿಕಾರಿ ಸಿ.ಎನ್. ಮಂಜುನಾಥ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ ವಸೂಲಾತಿಯಲ್ಲಿ ನಿರತರಾಗಿದ್ದು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯನಿರ್ವಹಿಸಿದ್ದಾರೆ ಎಂದು ತಿಳಿಸಿದರು.
ನಗರಸಭೆಯಲ್ಲಿ ಸಾರ್ವಜನಿಕರಿಗೆ ಮತ್ತು ಬಡ ಕುಟುಂಬದ ಹಿಂದುಳಿದ ವರ್ಗದವರಿಗೆ ವಿವಿಧ ರೀತಿಯ ಸೌಲಭ್ಯಗಳನ್ನು ಕಲ್ಪಿಸಲುವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಕರಪತ್ರಗಳನ್ನು ವಿತರಿಸಲಾಗಿದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಅರ್ಜಿಗಳು ಕಚೇರಿಗೆ ಸ್ವೀಕೃತವಾಗಿಲ್ಲ ಎಂದರು. ನಗರಸಭೆ ವ್ಯವಸ್ಥಾಪಕ ನಂಜುಂಡಸ್ವಾಮಿ, ಜಯಹರಿ, ಜಯರಾಮ್ ಇದ್ದರು.

ಮಾನಸ ಆಸ್ಪತ್ರೆ ಉದ್ಘಾಟನೆ
ಶಿಡ್ಲಘಟ್ಟ:
ತಾಲೂಕಿನ ನಾಗರಿಕರಿಗೆ ಉತ್ತಮ ವೈದ್ಯಕೀಯ ಸೇವೆ ನೀಡಲು ಪಟ್ಟಣದಲ್ಲಿ ಆಸ್ಪತ್ರೆ ಪ್ರಾರಂಭಿಸಲಾಗಿದೆ ಎಂದು ಡಾ. ಶಶಿಧರ್ ಕುಮಾರ್ ಹೇಳಿದರು.
ಪಟ್ಟಣದ ಸಿದ್ಧಾರ್ಥನಗರದಲ್ಲಿ ನೂತನವಾಗಿ ಸ್ಥಾಪಿಸಿರುವ ಮಾನಸ ಆಸ್ಪತ್ರೆ ಉದ್ಘಾಟನೆ ಮಾಡಿ ಮಾತನಾಡಿ, ಪಟ್ಟಣದ ಜನತೆ ಹೆಚ್ಚಿನ ವೈದ್ಯಕೀಯ ಸೌಲಭ್ಯಗಳಿಗಾಗಿ ಬೆಂಗಳೂರು ನಗರಕ್ಕೆ ಹೋಗಬೇಕಾಗಿದೆ ಇದನ್ನು ನಿಯಂತ್ರಿಸಲು ಆಸ್ಪತ್ರೆ ಪ್ರಾರಂಭ ಮಾಡಲಾಗಿದೆ ಎಂದರು. ವೃತ್ತ ನಿರೀಕ್ಷಕ ಶ್ರೀನಿವಾಸಮೂರ್ತಿ, ಡಾ. ಸತೀಶ್, ಶಿವಪ್ರಕಾಶ್, ಮುನಿಸ್ವಾಮಿ, ಶ್ರೀನಿವಾಸ್, ಅಫ್ಸರ್ ಪಾಷ, ಸುರೇಶ್, ಅಬ್ದುಲ್ ಗಫೂರ್, ನರಸಿಂಹಮೂರ್ತಿ, ತಮೀಮ್‌ಪಾಷ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement