ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸೋಮೇನಹಳ್ಳಿ ಗ್ರಾಪಂ ಕಚೇರಿಗೆ ಬೆಂಕಿ; ದಾಖಲೆ ಭಸ್ಮ

Srinivasa Murthy VN
Updated On : 13 Dec 2013, 12:09 pm

ಗುಡಿಬಂಡೆ: ತಾಲೂಕಿನ ಸೋಮೇನಹಳ್ಳಿ ಗ್ರಾಪಂ ಕಚೇರಿಯ ದಾಖಲೆ ಸಂಗ್ರಹ ಕೊಠಡಿಗೆ ಬೆಂಕಿ ಬಿದ್ದ ಪರಿಣಾಮ ಅಮೂಲ್ಯ ಕಡತಗಳು ಬೆಂಕಿಗೆ ಆಹುತಿಯಾಗಿವೆ.
ಗುರುವಾರ ಬೆಳಿಗ್ಗೆ ಕಚೇರಿ ಕಟ್ಟಡದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ವಿಷಯ ತಿಳಿದ ತಾಪಂ ಇಒ ಇಂದ್ರೇಶ್ ಸಿಬ್ಬಂದಿಯೊಡನೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಮಾತನಾಡಿದ ಅವರು, ಘಟನೆ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ದೂರು ನೀಡಲಾಗಿದೆ. ಅಗ್ನಿ ದುರಂತದಲ್ಲಿ ಉಂಟಾಗಿರುವ ನಷ್ಟದ ಬಗ್ಗೆ ಇನ್ನೂ ವಿವರ ಲಭ್ಯವಾಗಬೇಕಾಗಿದೆ. ಕಚೇರಿ ಗಣಕಯಂತ್ರ ಮತ್ತು ಪಿಠೋಕರಣಗಳೂ ಬೆಂಕಿಗೆ ಅಹುತಿಯಾಗಿವೆ ಎಂದು ತಿಳಿಸಿದ್ದಾರೆ.
ಅಕ್ರಮ ಬಯಲಾಗುವ ಭೀತಿ: ಅಭಿವೃದ್ಧಿಕಾಮಗಾರಿಗಳಿಗಾಗಿ ಪಂಚಾಯತಿಗೆ ಬಿಡುಗಡೆಯಾಗಿದ್ದ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ ಕೆಲದಿನಗಳ ಹಿಂದೆ ಸಿಪಿಎಂ ಕಾರ್ಯಕರ್ತರು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ಕೇಳಿ ಬಂದ ಬೆನ್ನೆಲ್ಲೇ ಈ ಕೃತ್ಯ ನಡೆದಿರುವುದು ಅನುಮಾನಗಳಿಗೆ ಕಾರಣವಾಗಿದೆ.
ಘಟನೆ ಖಂಡಿಸಿ ಸಿಪಿಎಂ ಧರಣಿ: ಗ್ರಾಪಂ ಕಚೇರಿಗೆ ಬೆಂಕಿ ಹಚ್ಚಿ ದಾಖಲೆ ನಾಶಪಡಿಸಿರುವ ಕೃತ್ಯ ಖಂಡಿಸಿ ಸಿಪಿಎಂ ಕಾರ್ಯಕರ್ತರು ಪಟ್ಟಣದ ತಾಪಂ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು. ಅಕ್ರಮ ಮುಚ್ಚಿ ಹಾಕುವ ಉದ್ದೇಶದಿಂದ ಪೂರ್ವಯೋಜಿತ ಕೃತ್ಯ ನಡೆಸಲಾಗಿದೆ. ಘಟನೆಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು. ಧರಣಿಯಲ್ಲಿ ಹಳೇ ಗುಡಿಬಂಡೆ ಲಕ್ಷ್ಮೀನಾರಯಣ, ಆದಿನಾರಾಯಣರೆಡ್ಡಿ, ಜಯರಾಮರೆಡ್ಡಿ, ದೇವರಾಜು, ಶಿವಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement