ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ವೈಜ್ಞಾನಿಕ ಕೃಷಿ ಪದ್ಧತಿಯಿಂದ ಅಧಿಕ ಇಳುವರಿ: ಅನುರೂಪ

Vishwanath S
Updated On : 15 Dec 2013, 1:33 am

ಗೌರಿಬಿದನೂರು: ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಉತ್ಪಾದನೆ ಮತ್ತು ಆದಾಯ ಹೆಚ್ಚಿಸಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕಿ ಅನುರೂಪ ಕಿವಿಮಾತು ಹೇಳಿದರು.
ತಾಲೂಕಿನ ಮಂಚೇನಹಳ್ಳಿ ಹೋಬಳಿಯ ಹಳೇಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಕೃಷಿ ಕ್ಷೇತ್ರ ಪಾಠಶಾಲೆ ಮತ್ತು ಪ್ರಗತಿಪರ ರೈತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರೈತರ ಅನುವುಗಾರ ಎಚ್.ಎನ್.ಕಿರಣ್‌ಕುಮಾರ್ ಮಾತನಾಡಿ, ದೇಶದಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿದ್ದರೆ ಉತ್ಪಾದನಾ ಕ್ಷೇತ್ರವಾದ ಕೃಷಿ ಕ್ಷೇತ್ರದಲ್ಲಿ ಕಡಿಮೆಯಾಗುತ್ತಿದೆ. ಗ್ರಾಮೀಣ ಭಾಗದ ಯುವ ರೈತರು ಕುಟುಂಬದ ಮಕ್ಕಳು ಉದ್ಯೋಗಅರಸಿ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ, ಅದನ್ನು ತಡೆಯಲು ಕೃಷಿಯಲ್ಲಿ ಆಧುನಿಕ ಪದ್ಧತಿ ಅಳವಡಿಸಿಕೊಂಡು, ಹನಿ ನೀರಾವರಿ ಸಾವಯವ ಗೊಬ್ಬರ ಬಳಸಿ ಉತ್ಪಾದನೆ, ವ್ಯವಸಾಯದಲ್ಲಿ ತೊಡಗಿಸಿಕೊಳ್ಳಿ, ಮಾದರಿ ರೈತರಾಗಲು ಬೇಕಾದ ಮಾರ್ಗದರ್ಶನ ಕೃಷಿ ಇಲಾಖೆಯಿಂದ ಮಾರ್ಗದರ್ಶನ ಪಡೆಯಲು ತಿಳಿಸಿದರು. ಇದೇ ವೇಳೆ ಗ್ರಾಮದ ಪ್ರಗತಿಪರ ರೈತರಾದ ಚಂದ್ರಶೇಖರ್ ಮತ್ತು ರಮೇಶ್ ಅವರನ್ನು ಸನ್ಮಾನಿಸಲಾಯಿತು. ಎಂ.ನಾರಾಯಣಸ್ವಾಮಿ, ಉಮಾಶಂಕರ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement