ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನರೇಗಾ ಯೋಜನೆಗಾಗಿ ಜಾಗೃತಿ ಅಭಿಯಾನ

Vishwanath S
Updated On : 17 Dec 2013, 12:41 pm

ಕ.ಪ್ರ.ವಾರ್ತೆ ,  ಕೋಲಾರ ,  ಡಿ.16
ಜಿಲ್ಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾ ಪಂಚಾಯಿತಿಯಿಂದ ಸೋಮವಾರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ರೇಷ್ಮೆ ಇಲಾಖೆ, ವಾರ್ತಾ ಇಲಾಖೆ ಹಾಗೂ ಅರಣ್ಯ ಇಲಾಖೆಯ ವಾಹನಗಳ ಮೇಲೆ ನರೇಗಾ ಯೋಜನೆಗೆ ಸಂಬಂಧಿದ ಮಾಹಿತಿಯುಳ್ಳ ಫ್ಲೆಕ್ಸ್‌ಗಳನ್ನು ಅಳವಡಿಸಿ ಗ್ರಾಮೀಣ ಜನತೆಯಲ್ಲಿ ಅರಿವು ಮೂಡಿಸುವ ಪ್ರಯತ್ನ ಇದಾಗಿದೆ ಎಂದು ಜಿ.ಪಂ ಸಿಇಒ ಝುಲ್ಫಿಖಾರ್ ಉಲ್ಲಾ ತಿಳಿಸಿದರು.
ನರೇಗಾ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆಯ ಪ್ರಗತಿ ಬಗ್ಗೆ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿತ್ತು. ಆದರೆ, ಅಧಿಕಾರಿಗಳ ಪರಿಶ್ರಮದಿಂದಾಗಿ 8 ಲಕ್ಷ ಜನರಿಗೆ ಉದ್ಯೋಗಾವಕಾಶ ಕಲ್ಪಿಸಿ 50 ಕೋಟಿ ರು. ಖರ್ಚು ಮಾಡುವ ಮೂಲಕ ಗುರಿ ಸಾಧನೆಗೆ ಪ್ರಾಮಾಣಿಕ ಪ್ರಯತ್ನ ನಡೆದಿದೆ ಎಂದರು.
ಜಿ.ಪಂ. ಅಧ್ಯಕ್ಷ ತೂಪಲ್ಲಿ ನಾರಾಯಣಸ್ವಾಮಿ ಅಭಿಯಾನಕ್ಕೆ ಚಾಲನೆ ನೀಡಿ, ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆ ಬಗ್ಗೆ ಬೀದಿ ನಾಟಕ, ಕರಪತ್ರ ಹಂಚಿಕೆ, ಸ್ಲೈಡ್ ಶೋ ಮೂಲಕ ಅರಿವು ಮೂಡಿಸಬೇಕೆಂದರು.
ಒಂದು ಕುಟುಂಬಕ್ಕೆ 100 ದಿನಗಳ ಉದ್ಯೋಗ ಖಾತರಿ, ವೈಯುಕ್ತಿಕ ಫಲಾನುಭವಿಗಳಿಗೆ ಕೆಲಸ, ಮಹಿಳೆ ಮತ್ತು ಪುರುಷರಿಗೆ ಸಮಾನ ಕೂಲಿ ಪಾವತಿ, ಕಾಯಕ ಬಂಧು ಹಾಗೂ ಕಾಯಕ ಸಂಘದ ಬಗ್ಗೆ ಅರಿವು ಮೂಡಿಸುವ ಸಮುವಾಗಿ ಅಭಿಯಾನ ನಡೆಸಲಾಗುತ್ತಿದ್ದು, ಗ್ರಾಮೀಣ ಜನತೆ ಇದರ ಪ್ರಯೋಜನ ಪಡೆಯುವಂತೆ ಕೋರಿದರು.
ಈ ಸಂದರ್ಭದಲ್ಲಿ ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ್, ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಸಿಮೋಲ್ ಮೋಹನ್, ಜಿ.ಪಂ ಉಪ ಕಾರ್ಯದರ್ಶಿ ಬದನೂರು, ಜಿಪಂ ಇಇ ದೇವರಾಜ್, ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಪುಟ್ಟಣ್ಣ,ಜಿಲ್ಲಾ ವಾರ್ತಾಧಿಕಾರಿ ರಂಗಾರೆಡ್ಡಿ, ಜಿಪಂ ಸಹಾಯಕ ಯೋಜನಾಧಿಕಾರಿ ಡಿ. ಮೋಹನ್‌ಕುಮಾರ್, ಲೆಕ್ಕಾಧಿಕಾರಿ ಗಂಗನರಸಯ್ಯ, ಆಧೀಕ್ಷಕಿ ಸುನಂದಮ್ಮ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement