ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

'ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ'

Vishwanath S
Updated On : 17 Dec 2013, 12:43 pm

ಚಿಂತಾಮಣಿ: ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಎಂದು ಮಕ್ಕಳ ರಕ್ಷಣಾಧಿಕಾರಿ ಹಾಗೂ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಎಂ.ಜಿ.ಗೋಪಾಲ್ ಹೇಳಿದರು.
ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಬಾಲ್ಯ ವಿವಾಹ ತಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪೋಷಕರು ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಆದ್ಯತೆ ನೀಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸಬೇಕು. ನಂತರ 18 ವರ್ಷ ವರ್ಷ ತುಂಬಿದ ಮೇಲೆ ವಿವಾಹ ಯೋಚನೆ ಮಾಡುವುದು ಸೂಕ್ತವೆಂದು ಹೇಳಿದರು.
ಬಾಲ್ಯ ವಿವಾಹದ ಬಗ್ಗೆ ಮುಖ್ಯವಾಗಿ ಗ್ರಾಮಾಂತರ ಹಳ್ಳಿಗಾಡಿನ ಜನರಿಗೆ ಅರಿವು ಮೂಡಿಸಿ ಗಂಡು-ಹೆಣ್ಣಿಗೆ ಕನಿಷ್ಟ ವಯೋವುತಿ ತಿಳಿದುಕೊಂಡು ಕಾನೂನು ಪ್ರಕಾರ ಮದುವೆ ಮಾಡುವುದು ಸೂಕ್ತವೆಂದು ತಿಳಿಸಿದರು.
ವಕೀಲರಾದ ರೂಪಶ್ರೀ ಮಾತನಾಡಿ, ಮೂಡನಂಭಿಕೆಗಳಿಗೆ ಜನರು ಒಳಗಾಗದೇ ಬಾಲ್ಯ ವಿವಾಹಗಳಿಗೆ ಕಡಿವಾಣ ಹಾಕಿ ಮಕ್ಕಳ ಉಜ್ವಲ ಭವಿಷ್ಯದ ಬಗ್ಗೆ ಯೋಚಿಸಿದಾಗ ಸಮಾಜದ ಉತ್ತಮ ವ್ಯಕ್ತಿಗಳಾಗಲು ಸಾಧ್ಯವೆಂದು ಹೇಳಿದರು.
ಹಳ್ಳಿಯಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಗ್ರಾಮಗಳ ಜನರಿಗೆ ಬಾಲ್ಯವಿವಾಹದ ಅರಿವು ಮೂಡಿಸಲು ಅಧಿಕಾರಿಗಳು ಹೆಚ್ಚು ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಸಂಪನ್ಮೂಲ ವ್ಯಕ್ತಿ ರಮೇಶ್,ಇರಗಂಪಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ರಂಗನಾಥ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ವೆಂಕಟನಾರಾಯಣಮ್ಮ,ಗ್ರಾಮೀಣ ಸೌಂದರ್ಯ ಅಭಿವೃದ್ಧಿ ಸಂಸ್ಥೆಯ ಡಾ.ವಿಜಯಮ್ಮ,ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿ ಗೋಪಾಲಕೃಷ್ಣ ಸೇರಿದಂತೆ ಹಲವು ಸ್ವಯಂ ಸೇವಾ ಸಂಘಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement