ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕೆಪಿಆರ್‌ಎಸ್ ರಸ್ತೆ ತಡೆ, ಧರಣಿ

Vishwanath S
Updated On : 17 Dec 2013, 12:42 pm

ಗುಡಿಬಂಡೆ: ನಿವೇಶನ ರಹಿತರಿಗೆ ಉಚಿತ ನಿವೇಶನ, ಧಾನ್ಯ ಖರೀದಿ ಕೇಂದ್ರಗಳ ಸ್ಥಾಪನೆ ಮುಂತಾದ ಬೇಡಿಕೆಗಳನ್ನು ಕೂಡಲೇ ಬಗೆಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಮುಖಂಡ ಹೆಚ್.ಪಿ. ಲಕ್ಷ್ಮೀನಾರಾಯಣ ತಾಲೂಕಿನ ಕೃಷಿ ಕಾರ್ಮಿಕರಿಗೆ ಹಾಗೂ ಬಡಜನತೆಗೆ ನಿವೇಶನ ಒದಗಿಸಬೇಕೆಂದು ಸಂಘಟನೆ ವತಿಯಿಂದ ಅರ್ಜಿ ಹಾಕುವ ಚಳವಳಿ ನಡೆಸಲಾಗಿತ್ತು. ಆದರೆ ಈತನಕ ಯಾವುದೇ ನಿರ್ಧಾರ ತೆಗೆದುಕೊಳ್ಳದೇ ಮೀನಮೇಷ ಎಣಿಸುತ್ತಿದೆ ನಮ್ಮ ತಾಲೂಕು ಆಡಳಿತ. ರೈತರು ಬೆಳೆದ ರಾಗಿ, ಜೋಳ ಮೊದಲಾದ ಧಾನ್ಯಗಳಿಗೆ ಸರ್ಕಾರ ಬೆಂಬಲ ಬೆಲೆ ಘೋಷಿಸಿದೆ. ಆದರೆ ದಾನ್ಯ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿ ಪಡಿಸಿದಾಗ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಾವಕಾಶ ಕೊರತೆಯಿದೆ ಎಂದು ಸಬೂಬು ಹೇಳುತ್ತಿದ್ದಾರೆ. ಹೀಗಾಗಿ ರಾಜ್ಯ ಸಮಿತಿ ಸೂಚನೆ ಮೇರೆಗೆ ಹೋಬಳಿ ಹಾಗೂ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಯಿತು ಎಂದು ಹೇಳಿದರು.
ಪ್ರತಿಭಟನಾಕಾರರ ಬಂಧನ: ರಸ್ತೆಯಲ್ಲಿ ಕುಳಿತು ಪ್ರತಿಭಟನೆಯಲ್ಲಿ ನಿರತರಾಗಿದ್ದ ಸುಮಾರು 35 ಜನ ಕೆಪಿಆರ್‌ಎಸ್ ಸದಸ್ಯರನ್ನು ಈ ಸಂದರ್ಭದಲ್ಲಿ ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ಧರಣಿಯಲ್ಲಿ ಮುಖಂಡರಾದ ಜಯರಾಮರೆಡ್ಡಿ, ದೇವರಾಜು, ಈಶ್ವರಪ್ಪ, ಮದ್ದಿರೆಡ್ಡಿ, ಅಶ್ವತ್ಥರೆಡ್ಡಿ, ಆದಿನಾರಾಯಣಪ್ಪ, ಅಶ್ವತ್ಥಪ್ಪ ಸೇರಿದಂತೆ ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement